ರೈತರ ಜಾನುವಾರುಗಳಿಗೆ ಅನುಕೂಲವಾಗಲೆಂದು ಸರ್ಕಾರವು ಕೃಷಿ ಸಂಜೀವಿನ ಸಹಾಯವಾಣಿಯನ್ನು ಆರಂಭಿಸಿದೆ.
ಕೃಷಿಯಲ್ಲಿ ಮಣ್ಣು, ಕೀಟರೋಗ, ನೀರು ಪರೀಕ್ಷೆ ಮತ್ತು ಇತರ ತಾಂತ್ರಿಕ ನೆರವಿಗಾಗಿ ಕೃಷಿ ಇಲಾಖೆ ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಗಳನ್ನು ಆರಂಭಿಸಿದ್ದು, ರೈತರ ಮನೆ ಬಾಗಿಲಿಗೆ ತೆರಳಿ ಕೃಷಿ ಸಂಜೀವಿನಿ ವಾಹನ ಸೇವೆ ನೀಡಲಿದೆ.
ಇದನ್ನೂ ಓದಿರಿ: 75 ಸಂಚಾರಿ ಪಶು ಚಿಕಿತ್ಸಾ ವಾಹನಗಳ ಲೋಕಾರ್ಪಣೆ..ಇವುಗಳ ವಿಶೇಷತೆಯೇನು..?
ಕೃಷಿ ಸಂಜೀವಿನ ಸ್ಥಾಪನೆಯಿಂದ ರೋಗ ಸರ್ವೇಕ್ಷಣಾ ಮತ್ತು ಸಲಹಾ ಘಟಕಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅನುಕೂಲವಾಗಲಿದೆ.
ಅಲ್ಲದೆ ಹೆಚ್ಚಿನ ಸಂಖ್ಯೆಯ ರೈತರ ತಾಲೂಕುಗಳಿಗೆ ತಾಂತ್ರಿಕ ತಂಡ ಭೇಟಿ ನೀಡಿ ಸಹಕಾರಿಯಾಗಲಿದೆ. 155313 ಸಹಾಯವಾಣಿಗೆ ಕರೆ ಮಾಡಿದರೆ, ಕರೆ ಮಾಡಿದ ರೈತರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಕರೆ ಹೋಗಲಿದೆ.
2020-21ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 40 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಗಳನ್ನು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸ್ಥಾಪಿಸಲು ಅನುದಾನವನ್ನು ಒದಗಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
50 ಲೀ. ವರೆಗೆ ಹಾಲು ನೀಡುವ ದೇಸಿ ತಳಿಯ ಹಸುಗಳು! ರೈತರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ.
ಮೇಕೆ ಸಾಕಾಣಿಕೆಗೆ ಲಾಭದಾಯಕವಾದ ತಳಿಗಳು ಯಾವು..? ಇಲ್ಲಿದೆ ಮಾಹಿತಿ
ಇದೇ ರೀತಿ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನದ ಕ್ರಿಯಾ ಯೋಜನೆಯಡಿ ಲಭ್ಯವಿರುವ ಅನುದಾನದಡಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ( ಕೃಷಿ ಸಂಜೀವಿನಿ ) ಲೋಕಾರ್ಪಣೆಗೊಳಿಸಲಾಗಿದೆ.
155313 ಇದು ಕೃಷಿ ಸಂಜೀವಿನಿ ಸಹಾಯವಾಣಿ
ಇದು ಕೃಷಿ ಸಂಜೀವಿನಿ ಟೋಲ್ ಫ್ರೀ ಸಹಾಯವಾಣಿಯಾಗಿದ್ದು, ಈ ಸಂಖ್ಯೆಗೆ ಯಾವುದಾದರೂ ಜಿಲ್ಲೆಯಿಂದ ಕರೆ ಮಾಡಿದಲ್ಲಿ ಟೋಲ್ ಫ್ರೀ ಸಂಖ್ಯೆಯಿಂದ ಕರೆ ಮಾಡಿದ ರೈತರಿರುವ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಕರೆ ಹೋಗುತ್ತದೆ.
ಆಗ ರೈತರು ತಮ್ಮ ಸಮಸ್ಯೆಯನ್ನು ತಿಳಿಸಿ ಪರಿಹಾರ ಪಡೆಯಬಹುದಾಗಿದ್ದು, 155313 ಆರೋಗ್ಯ ಇಲಾಖೆಯ ಆ್ಯಂಬುಲೆನ್ಸ್ ನಂತೆ ಸಹಾಯವಾಣಿಯಾಗಿ ಕೆಲಸ ಮಾಡುತ್ತದೆ.
ಮೇ ತಿಂಗಳಲ್ಲಿ ಬಿತ್ತನೆ ಮಾಡಬೇಕಾದ ಬೆಳೆಗಳು! ಇದರಿಂದ ರೈತರಿಗಾಗಲಿದೆ ಹೆಚ್ಚಿನ ಲಾಭ
POULTRY Farming ತುಂಬಾ ಲಾಭದಾಯಕ ಉದ್ಯೋಗ! ಮತ್ತು ಸರ್ಕಾರದಿಂದ ಸಹಾಯ?
ಏನಿದು ಕೃಷಿ ಸಂಜೀವಿನಿ…?
ಇದು ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆಯು ನೈಸರ್ಗಿಕ ವಿಕೋಪಗಳಾದ ಅನಾವೃಷ್ಟಿ , ಅತಿವೃಷ್ಟಿ , ಚಂಡಮಾರುತ, ಬೆಳೆಗಳಿಗೆ ಕಾಡುವ ಕೀಟ ಮತ್ತು ರೋಗ ಬಾಧೆ ಹಾಗೂ ಮಣ್ಣಿನ ಫಲವತ್ತತೆ ಮತ್ತು ಇತರ ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ.
ಸುಧಾರಿತ ಕೃಷಿ ಉತ್ಪಾದನಾ ತಾಂತ್ರಿಕತೆ , ಗುಣಮಟ್ಟದ ಕೃಷಿ ಪರಿಕರಗಳ ಪೂರೈಕೆ ಮತ್ತು ಶಿಫಾರಸ್ಸು ಮಾಡಲಾದ ರಸಗೊಬ್ಬರಗಳ ಸಮರ್ಪಕ ಬಳಕೆ , ರೋಗ – ಕೀಟಗಳ ಹತೋಟಿ , ಮಣ್ಣಿನಲ್ಲಿ ಲಭ್ಯವಿರುವ ಪೋಷಕಾಂಶಗಳ ಬಗ್ಗೆ ರೈತರಿಗೆ ಮಾಹಿತಿ ಒದಗಿಸಿ , ಸೂಕ್ತ ಬೆಳೆ ಬೆಳೆಯಲು ಪ್ರೋತ್ಸಾಹಿಸಲಾಗುವುದು.
“ಸಾವಯವ ಆಹಾರ ರಫ್ತು ಭಾರತದ ಆರ್ಥಿಕತೆ ಬದಲಾಯಿಸಬಹುದು”- ಅಮಿತ್ ಶಾ
ಗುಡ್‌ನ್ಯೂಸ್: ದೇಶಾದ್ಯಂತ ಬಲವರ್ಧಿತ ಅಕ್ಕಿ ವಿತರಣೆಗೆ ಸಂಪುಟ ಅಸ್ತು..!
ಕೀಟ , ರೋಗ ಮತ್ತು ಕಳೆಗಳ ಬಾಧೆ ಹಾಗೂ ಮಣ್ಣಿನ ಪೋಷಕಾಂಶ ಕೊರತೆ ಹಾಗು ಸಮರ್ಪಕ ನಿರ್ವಹಣೆ ಕುರಿತಂತ ರೈತರ ತಾಕುಗಳಲ್ಲಿಯೇ ಹತೋಟಿ ಕ್ರಮಗಳ ಕುರಿತು ಮಾರ್ಗೊಪಾಯಗಳನ್ನು ಒದಗಿಸಲಾಗುವುದು
ಸರ್ವೇಕ್ಷಣೆಯಲ್ಲಿ ಕೀಟ / ರೋಗ ಬಾಧೆ ಕಂಡುಬಂದಲ್ಲಿ ತಕ್ಷಣವೇ ರೈತರಿಗೆ ಕೈಗೊಳ್ಳಬೇಕಾದ ಸಂಭವನೀಯ ನಿರ್ವಹಣಾ ಕ್ರಮಗಳ ಮಾಹಿತಿಯನ್ನು ರೈತರ ಮೊಬೈಲ್ ಗಳಿಗೆ ಸಂದೇಶ ಅಥವಾ ಮುದ್ರಿತ ಚೀಟಿ ನೀಡುವ ಮೂಲಕ ಉತ್ಪಾದನಾ ವೆಚ್ಚ ಮತ್ತು ಬೆಳಹಾನಿಯನ್ನು ತಗ್ಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.
Share your comments