ವಿಶ್ವದಲ್ಲಿ 2023ನೇ ವರ್ಷವನ್ನು ಸಿರಿಧಾನ್ಯಗಳ ವರ್ಷ ಎಂದು ಆಚರಿಸಲಾಗುತ್ತಿದ್ದು, ಕರ್ನಾಟಕವು ಸಿರಿಧಾನ್ಯದ ಮೇಳಕ್ಕೆ ಆದ್ಯತೆ ನೀಡುತ್ತಿದೆ.
ATM ಹಣ ನಿರಾಕರಿಸಿದ HDFC ಬ್ಯಾಂಕ್‌ಗೆ 2. 24 ಲಕ್ಷ ಭಾರೀ ದಂಡ!
ಇನ್ನು ರೈತರಿಗೆ ಮಾರುಕಟ್ಟೆ ಕಲ್ಪಿಸಲು, ಸಾವಯವ ಮತ್ತು ಸಿರಿಧಾನ್ಯ ಮಾರುಕಟ್ಟೆ ವಿಸ್ತರಣೆ ಜೊತೆಗೆ ಆರೋಗ್ಯಕರ ಜವನ ಶೈಲಿಗೆ ಸಿರಿಧಾನ್ಯಗಳ ಮಹತ್ವ ತಿಳಿಸುವ ಉದ್ದೇಶದಿಂದ ಜನವರಿ 20ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ -2023 ಆಯೋಜಿಸಲಾಗುತ್ತಿದೆ.
Nandini and Amul| ನಂದಿನಿ ಮತ್ತು ಅಮುಲ್ ಬ್ರ್ಯಾಂಡ್ ವಿಲೀನಕ್ಕೆ ವಿರೋಧ
ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ರಾಜ್ಯ ಕೃಷಿ ಇಲಾಖೆ ವತಿಯಿಂದ ಮೂರು ದಿನ (ಜ.20-22) ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಗುರುವಾರ ಸಿರಿಧಾನ್ಯ ಮೇಳದ ಪೂರ್ವಭಾವಿ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 2023 ಅನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಣೆ ಮಾಡಲಾಗಿದೆ. ಸಿರಿಧಾನ್ಯ ಬೆಳೆಯುವ ರೈತರಿಗೆ ಮಾರುಕಟ್ಟೆ ಒದಗಿಸಲು ಹಾಗೂ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಮೇಳ ಆಯೋಜಿಸಲಾಗಿದೆ ಎಂದರು.
86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಸಿದ್ಧತೆ!
ಜನವರಿ 20ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮೇಳದಲ್ಲಿ ಚರ್ಚಾಗೋಷ್ಠಿಗಳು, ಸಾವಯವ ಮತ್ತು ಸಿರಿಧಾನ್ಯಗಳ ಪ್ರದರ್ಶನ ಮಳಿಗೆಗಳು, ಸಿರಿಧಾನ್ಯ ಉತ್ಪನ್ನಗಳು, ಸಭೆ, ಕಾರ್ಯಾಗಾರಗಳು ಇರಲಿವೆ. ಒಟ್ಟು ಸುಮಾರು 100ಕ್ಕೂ ಹೆಚ್ಚು ಕಂಪನಿಗಳು 200ಕ್ಕೂ ಹೆಚ್ಚು ಮಳಿಗೆಗಳು ಮೇಳದಲ್ಲಿ ರೈತರು ಮತ್ತು ಸಾರ್ವಜನಿಕರನ್ನು ಆಕರ್ಷಿಸಲಿವೆ. ವಿಶೇಷವಾಗಿ ಮೇಳದಲ್ಲಿ ಸಿರಿಧಾನ್ಯ ಬೆಳೆಗಾರರು, ಗ್ರಾಹಕರು, ರಫ್ತುದಾರರು, ಸಂಪರ್ಕ ಕಲ್ಪಿಸುವ ಮಾರಾಟ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಜನರು ಜಂಕ್ ಫುಡ್ ಗುಲಾಮಗಿರಿಯಿಂದ ಹೊರ ಬರಬೇಕು. ಆರೋಗ್ಯಕರ ಆಹಾರ ಶೈಲಿಗೆ ಹೆಚ್ಚು ಆದ್ಯತೆ ನೀಡಬೇಕಿದೆ. ಆಗ ಮಾತ್ರವೇ ಸದೃಢ ಜೀವನ ನಮ್ಮದಾಗುತ್ತದೆ ಎಂದು ಹೇಳಿದರು.
Pm Kisan| ಪಿ.ಎಂ ಕಿಸಾನ್ ಅಪ್ಡೇಟ್: 13ನೇ ಕಂತಿಗಾಗಿ ಕಾಯುತ್ತಿರುವ ಕೋಟಿಗಟ್ಟಲೆ ರೈತರಿಗೆ ಮಹತ್ವದ ಮಾಹಿತಿ
ಜನವರಿ 14ಕ್ಕೆ ಜಾಗೃತಿ ವಾಕಥಾನ್ ಆಯೋಜನೆ
ಸಿರಿಧಾನ್ಯ ಸಾವಯವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಜನವರಿ 14 ರಂದು ಕಬ್ಬನ್‌ಪಾರ್ಕಿನಲ್ಲಿ ವಾಕ್‌ಥಾನ್ ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಿರಿಧಾನ್ಯ ಸಾವಯವ ಮೇಳ ನಡೆಯುತ್ತಿದ್ದು, ಸಿರಿಧಾನ್ಯ ಬಳಕೆ ಮತ್ತು ಬೆಳೆಯುವಲ್ಲಿ ಕರ್ನಾಟಕ ದೇಶಕ್ಕೆ ಮಾದರಿ ಆಗಿದೆ ಎಂದು ಹೇಳಿದರು.
ಇದೇ ವೇಳೆ ಅಂತಾರಾಷ್ಟ್ರೀಯ ಸಿರಿಧಾನ್ಯ ಮಾಹಿತಿ ಸುಲಭವಾಗಿ ಎಲ್ಲಿರಿಗು ಲಭ್ಯವಾಗುವಂತೆ ಅಭಿವೃದ್ಧಿ ಪಡಿಸಲಾದ ವೆಬ್‌ಸೈಟ್ ಒಂದನ್ನು ಕೃಷಿ ಸಚಿವರು ಬಿಡುಗಡೆ ಮಾಡಿದರು.
ಕೃಷಿ ಇಲಾಖೆಯ ನಿರ್ದೇಶಕ ಜಿ.ಟಿ.ಪುತ್ರನ್, ಆಯುಕ್ತ ಶರತ್, ಕೆಪೆಕ್ ಅಧ್ಯಕ್ಷ ವಿರೂಪಾಕ್ಷಪ್ಪ ,ಕೆಮಿಕ್ ನಿರ್ದೇಶಕ ಪದ್ಮನಾಭಯ್ಯ ಇದ್ದರು.
Share your comments