1. ಇತರೆ

ಪಶುಸಂಗೋಪನೆ ಇಲಾಖೆಯ ಕಕ ಭಾಗದಲ್ಲಿ 115 ಖಾಲಿ ಹುದ್ದೆ ಭರ್ತಿಗೆ ಕ್ರಮ

Animal-Doctors

ಪಶುಸಂಗೋಪನೆ ಇಲಾಖೆಯ ಕಲ್ಯಾಣ ಕರ್ನಾಟಕ ಭಾಗದಲ್ಲಿ 371 ಜೆ ಅನುಚ್ಚೇದದ ಅಡಿಯಲ್ಲಿ 115 ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಿಕೊಳ್ಳಲು ಕ್ರಮ ವಹಿಸಲಾಗಿದ್ದು ಸದ್ಯದಲ್ಲೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೇ ಕೊವಿಡ್-19 ಸಂಕಷ್ಟದ ಸಮಯದಲ್ಲಿ ಉದ್ಯೋಗ ಸೃಷ್ಟಿ ಆಗುತ್ತಿರುವುದು ಮತ್ತಷ್ಟು ಸಂತಸ ತಂದಿದೆ. ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಕುರಿತು  ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದರ ಪರಿಣಾಮವಾಗಿ  ಖಾಲಿ ಇರುವ ಹುದ್ದೆಗಳನ್ನು ಶ್ರೀಘ್ರದಲ್ಲಿ ತುಂಬಿಕೊಳ್ಳುಲು ಕ್ರಮ ಕೈಗೊಳ್ಳುದಾಗಿ ಸಿ.ಎಂ ಸಹ ಭರವಸೆ ನೀಡಿದ್ದರು.   ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಸಂವಿಧಾನದ 371 (ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದವರಿಗೆ 32 ಪಶುವೈದ್ಯ ಪರೀಕ್ಷಕರ ಹುದ್ದೆಗಳನ್ನು ಹಾಗೂ 83 ಪಶುವೈದ್ಯಕೀಯ ಸಹಾಯಕ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗುತ್ತಿದೆ. 

ಮೂಲ ವೃಂದದ ಒಟ್ಟು ವೃಂದದ ಬಲದಲ್ಲಿ 371 ಜೆಅಡಿಯಲ್ಲಿ ಸ್ಥಳಿಯ ವೃಂದದಲ್ಲಿ ಶೇ 75% ಪ್ರಮಾಣದಲ್ಲಿ ಮೀಸಲಿರಿಸಿದ 32 ಪಶುವೈದ್ಯ ಪರೀಕ್ಷಕರ ಹುದ್ದೆಗಳನ್ನು ಹಾಗೂ 83 ಪಶುವೈದ್ಯಕೀಯ ಸಹಾಯಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ತುಂಬಿಕೊಳ್ಳಲು ನಿರ್ಧರಿಸಲಾಗಿದೆ.  ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗೆ ಮತ್ತು ಉದ್ಯೋಗ ಸೃಷ್ಠಿಗೆ ಇನ್ನೂ ಹೆಚ್ಚಿನ ಒತ್ತು ನೀಡಲಾಗುವುದು. ಅಲ್ಲದೆ ಅಗತ್ಯವಾದ ಎಲ್ಲ ಕ್ರಮಗಳನ್ನುಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪ್ರಭು ಚವ್ಹಾಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Published On: 27 June 2020, 01:33 PM English Summary: Action to fill 115 vacancies in Animal Husbandry Department

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.