ಪ್ರಸಕ್ತ 2021-22ನೇ ಸಾಲಿನ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ನಿರುದ್ಯೋಗಿ ಮಹಿಳೆಯರು ವಿವಿಧ ಆದಾಯೋತ್ಪನ್ನ ಚಟುವಟಿಕೆಗಳು ಹಾಗೂ ಸೇವಾ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುವಾಗುವಂತೆ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಫಜಲಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು. ಆದಾಯ ಮಿತಿ ಸಾಮಾನ್ಯ ವರ್ಗದವರಿಗೆ 1,50,000 ರೂ., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ 2,00,000 ರೂ. ಮೀರಿರಬಾರದು. ಇದರಲ್ಲಿ ಸಂಕಷ್ಟ ಪರಿಸ್ಥಿತಿ/ ವಿಕಲಚೇತನ/ವಿಧವಾ ಮಹಿಳೆಯರಿಗೆ ಆದಾಯದ ಮಿತಿ ಇರುವುದಿಲ್ಲ. ಅರ್ಜಿದಾರರು ಸೌಲಭ್ಯ ಪಡೆಯಲಿಚ್ಛಿಸುವ ಚಟುವಟಿಕೆಯಲ್ಲಿ ಸಾಕಷ್ಟು ಜ್ಞಾನ ಮತ್ತು ಅನುಭವ ಹೊಂದಿರಬೇಕು. ಇಲಾಖೆ ಹಾಗೂ ಇತರ ತರಬೇತಿ ಯೋಜನೆಗಳಡಿ ತರಬೇತಿ ಪಡೆದ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ. ವಿಧವೆಯರು, ಸಂಕಷ್ಟ ಮಹಿಳೆಯರು, ವಿಕಲಚೇತನರು, ದೇವದಾಸಿ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.
ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸಿದ ಮಹಿಳೆಯರು ಅವಶ್ಯಕ ದಾಖಲಾತಿಗಳ (ಮೂರು ಪ್ರತಿ) ಲಗತ್ತಿಸಿ 2021ರ ಸೆಪ್ಟೆಂಬರ್ 15 ರೊಳಗಾಗಿ ಅಫಜಲಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಅಫಜಲಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಉದ್ಯೋಗಿನಿ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಹತೆ
ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು. ಗರಿಷ್ಠ 50 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ವಾರ್ಷಿಕ ಆದಾಯ 2 ಲಕ್ಷ ಕ್ಕಿಂತ ಹೆಚ್ಚರಬಾರದು. ವಿಶೇಷ ವರ್ಗ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳ ವಾರ್ಷಿಕ ಆದಾಯ 1.50 ಲಕ್ಷ ಮೀರಿರಬಾರದು.
- ಜಾತಿ ಪ್ರಮಾಣ ಪತ್ರ ಹೊಂದಿರಬೇಕು. ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಮತದಾರರ ಗುರುತಿನ ಚೀಟಿ ಹೊಂದಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ವಿಧವೆಯರು ಪತಿಯ ಮರಣ ದೃಢೀಕರಣ ಪ್ರಮಾಣ ಪತ್ರ ಹೊಂದಿರಬೇಕು. ವಿಕಲಚೇತನರಾಗಿದ್ದಲ್ಲಿ ವೈದ್ಯಕೀಯ ಪ್ರಮಾಣ ಪತ್ರ ಹೊಂದಿರಬೇಕು.
ಎಸ್ಸಿ / ಎಸ್ಟಿ ಮಹಿಳೆಯರಿಗೆ ಸಾಲದ ಮೊತ್ತಕ್ಕೆ ಶೇಕಡ 50 ರಷ್ಟು ಸಹಾಯಧನ ನೀಡಲಾಗುತ್ತದೆ. ಇತರೆ ವರ್ಗಗಳ ಮಹಿಳೆಯರಿಗೆ ಸಾಲದ ಮೊತ್ತಕ್ಕೆ ಶೇಕಡ.30 ರಷ್ಟು ಸಹಾಯಧನ ನಿಗದಿ ಮಾಡಲಾಗಿದೆ. ಸಾಲದ ಮಿತಿಯನ್ನು 1 ಲಕ್ಷದಿಂದ 3 ಲಕ್ಷಗಳವರೆಗೆ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಅರ್ಜಿಗಳನ್ನು ತಮ್ಮ ಸಂಬಂಧಪಟ್ಟ ತಾಲ್ಲೂಕು/ ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಛೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು.
Share your comments