ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಹನಿ ನೀರಾವರಿ ಅಳವಡಿಸಲು ತೋಟಗಾರಿಕಾ ಇಲಾಖೆಯಿಂದ ವಿಶೇಷ ಅನುದಾನ ನೀಡಲಾಗುವುದು ಎಂದು ಹಿರಿಯ ಹಾಯಕ ತೋಟಗಾರಿಕಾ ನಿರ್ದೇಶಕ ಎಂ.ಶ್ರೀನಿವಾಸನ್ ತಿಳಿಸಿದ್ದಾರೆ.
ಸಕ್ತ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಂಚಾಯಿ ಯೋಜನೆಯಡಿ ಈ ಸೌಲಭ್ಯ ದೊರೆಯಲಿದೆ. ತೋಟಗಾರಿಕೆಯಲ್ಲಿ ಹನಿ ನೀರಾವರಿ ಅಳವಡಿಸಲು ಬಯಸುವ ರೈತರು, ಅಗತ್ಯವಾದ ಉಪಕರಣ ಅಳವಡಿಸಲು ತಾಲ್ಲೂಕಿನ ತೋಟಗಾರಿಕಾ ಇಲಾಖೆ ಕಚೇರಿ ಅಥವಾ ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
ಸಬ್ಸಿಡಿ ದರದಲ್ಲಿ ಹನಿ ನೀರಾವರಿ ಉಪಕರಣ ನೀಡಲು ಅರ್ಜಿ ಆಹ್ವಾನ
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಹನಿ ನೀರಾವರಿ ಉಪಕರಣ ಸೌಲಭ್ಯ ಕಲ್ಪಿಸಲು ಕೋಲಾರ ತೋಟಗಾರಿಕೆ ಇಲಾಖೆಯು ಅರ್ಜಿ ಆಹ್ವಾನಿಸಿದೆ.
ಆಸಕ್ತರು ತೋಟಗಾರಿಕೆ ಇಲಾಖೆ ತಾಲ್ಲೂಕು ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ತಾಲ್ಲೂಕು
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಅಥವಾ ಹೋಬಳಿ ಮಟ್ಟದ ಇಲಾಖೆ ಅಧಿಕಾರಿಗಳು ಅಥವಾ 7829512236 ಮೊಬೈಲ್ ಸಂಖ್ಯೆ ಸಂಪರ್ಕಿಸಬಹುದು ಎಂದು ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹಾಯಧನಕ್ಕೆ ಅರ್ಜಿ ಆಹ್ವಾನ:
ಚಿಕ್ಕಮಗಳೂರು ತೋಟಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮಾಹಿತಿಗೆ ದೂ: 8618186586 ಸಂಪರ್ಕಿಸಬಹುದು.
Share your comments