1. ಸುದ್ದಿಗಳು

ಅಂಗವಿಕಲರ ಆರೋಗ್ಯ ಸೇವೆಗೆ 5 ಲಕ್ಷ; ಚಿಕಿತ್ಸಾ ವೆಚ್ಚ ಘೋಷಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Hitesh
Hitesh
Chief Minister Basavaraja Bommai

ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆಯನ್ನು ಪ್ರಾರಂಭಿಸುವ ಮೂಲಕ  5 ಲಕ್ಷ ರೂಪಾಯಿ ವರೆಗೆ ಅವರ ಚಿಕಿತ್ಸಾ

ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  

ವಿಕಲಚೇನರು ಧೈರ್ಯವಾಗಿ ಹಾಗೂ ನೆಮ್ಮದಿಯಿಂದ ಜೀವನ ನಡೆಸಲು ಸರ್ಕಾರ  ಸಹಕಾರ ನೀಡಲಿದೆ.

ಸರ್ಕಾರದ ವತಿಯಿಂದ ನಿರ್ಮಿಸುವ ಮನೆಗಳಲ್ಲಿ ಅಂಗವಿಕಲರಿಗೆ ನೀಡುವಲ್ಲಿ ಶೇ3 ರಷ್ಟು ಮೀಸಲಾತಿ ಕಲ್ಪಿಸಲಾಗುವುದು.

ಬುದ್ಧಿಮಾಂದ್ಯ ಮಕ್ಕಳಿಗೆ ಶೆಲ್ಟರ್ಡ್ ವರ್ಕ್ ಶಾಪ್ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದರು.

ಸರ್ಕಾರದ ವತಿಯಿಂದ ಅಂಗವಿಕಲಿಗೆ ಪವರ್ಡ್ ಟ್ರೈಸೈಕಲ್ ಕಲ್ಪಿಸಲಾಗುತ್ತಿದೆ. ಪ್ರಸಕ್ತ ವರ್ಷ ಈ ಯೋಜನೆಗೆ 25 ಕೋಟಿ

ರೂಪಾಯಿ ನೀಡಿ 2 ಸಾವಿರ ಟ್ರೈ ಸೈಕಲ್‌ಗಳನ್ನು ಮಾರ್ಚ್ 31ರೊಳಗೆ ನೀಡಲು ತೀರ್ಮಾನಿಸಲಾಗಿದೆ ಎಂದರು.   
ಮುಂದಿನ ಬಜೆಟ್‌ನಲ್ಲಿ ವಿಕಲಚೇತನರ ವಿದ್ಯಾಭ್ಯಾಸಕ್ಕಾಗಿ ವಿಶೇಷ ಅನುದಾನ ವಸತಿ ಶಾಲೆಗಳಲ್ಲಿ ಬುದ್ಧಿಮಾಂದ್ಯ

ಮಕ್ಕಳಿಗೆ ನೀಡಲಾಗುತ್ತಿದ್ದು, 6800 ರೂ.ಗಳನ್ನು 10,200 ರೂಪಾಯಿಗೆ ಹೆಚ್ಚಿಳ ಮಾಡಲಾಗಿದೆ.

ಬುದ್ಧಿಮಾಂದ್ಯ ಮಕ್ಕಳ ವಸತಿರಹಿತ ಶಾಲೆಗಳಲ್ಲಿ ನೀಡಲಾಗುತ್ತಿದ್ದ 6 ಸಾವಿರ ಮೊತ್ತವನ್ನು 9 ಸಾವಿರ ರೂಪಾಯಿಗೆ ಹೆಚ್ಚಿಸಲಾಗುತ್ತಿದೆ.

ಶ್ರವಣದೋಷ ಹಾಗೂ ವಾಕ್‌ದೋಷ ಮಕ್ಕಳ ವಸತಿ ಶಾಲೆಗಳಲ್ಲಿರುವವರಿಗೆ 9,300 ರೂ.ಗಳನ್ನು,

ವಸತಿರಹಿತ ಶಾಲೆಗಳ ಅಂಧಕಿವುಡ ಮಕ್ಕಳಿಗೆ 7800 ರೂ.ಗಳನ್ನು ,ಹಗಲುಸೇವೆ ಯೋಗಕ್ಷೇಮ ಕೇಂದ್ರಗಳಿಗೆ 15 ಸಾವಿರ ರೂಗಳನ್ನು ,

ವೃದ್ಧಾಶ್ರಮ ಕೇಂದ್ರಗಳ ನಿರ್ವಹಣೆಗೆ 12 ಲಕ್ಷ ರೂ. ನೀಡಲಾಗುತ್ತಿದೆ. ಮುಖ್ಯಮಂತ್ರಿಯಾದ ತಕ್ಷಣ ವಿಕಲಚೇತನರ ಮಾಸಾಶನವನ್ನು ಹೆಚ್ಚಿಸಲಾಗಿದೆ.

ಮುಂದಿನ ದಿನಗಳಲ್ಲಿ ಈ ಸವಲತ್ತುಗಳನ್ನು ಹೆಚ್ಚಿಸಲಾಗುವುದು. ಆಸಿಡ್ ದಾಳಿಯಿಂದ ಬಳಲುವ ಹೆಣ್ಣು ಮಕ್ಕಳಿಗೆ 3000 ರೂ.

ದಿಂದ 10000 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ಅಲ್ಲದೇ ವಿಕಲಚೇತನರ ವಿದ್ಯಾಭ್ಯಾಸಕ್ಕಾಗಿ

ಮುಂದಿನ ಬಜೆಟ್ ನಲ್ಲಿ ವಿಶೇಷ ಅನುದಾನವನ್ನು ಮೀಸಲಿರಿಸಲಾಗುವುದು ಎಂದು ಅವರು ಭರವಸೆ ನೀಡಿದರು.  

ಅಂಗಾಂಗಳ ಕೊರತೆ ಇದೆಯೆಂಬ ಕೀಳರಿಮೆ ಬೇಡ.ವಿಕಲಚೇತನರು ವಿಶೇಷವಾದ ದೇವರ ಮಕ್ಕಳು.

ಸವಾಲುಗಳನ್ನು ಎದುರಿಸುವ ವಿಶೇಷ ಶಕ್ತಿಯನ್ನು ಹಾಗೂ ಮನೋಸ್ಥೈರ್ಯವನ್ನು ದೇವರು ನಿಮಗೆ ನೀಡಿದ್ದಾನೆ ಎಂದು ಹೇಳಿದರು.   

ನೀವು ಆತ್ಮ ವಿಶ್ವಾಸದಿಂದ ಇರಬೇಕು. ನಾವೂ ಇತರರಂತೆ ಬದುಕಿ ತೋರಿಸುತ್ತೇವೆ ಎಂಬ ಛಲ ಮತ್ತು ನಂಬಿಕೆ ಇರಬೇಕು.

ನಿಮಗೆ ಅನುಕಂಪದ ಅವಶ್ಯಕತೆ ಇಲ್ಲ. ವಿಕಲಚೇತನರನ್ನು ಸಶಕ್ತಗೊಳಿಸುವ ಸಮಾಜದ ಅವಶ್ಯಕತೆ ಇದೆ.

ಕೆಳಗೆ ಬೀಳುವ ವ್ಯಕ್ತಿಯನ್ನು ಮೇಲೆತ್ತುವುದು ಮಾನವ ಧರ್ಮ, ಅದನ್ನು ಮನುಷ್ಯರು ಮರೆಯದೇ ನೆರವು ನೀಡಬೇಕು.

ಇದು ವಿಶ್ವ ಮಾನವ ಸಮಾಜ. ಒಬ್ಬರಿಗೊಬ್ಬರು ಕೈ ಹಿಡಿದು ನಡೆಯುವ ಮಾನವೀಯ ಗುಣವನ್ನು ಎಲ್ಲರೂ ಪಾಲಿಸಬೇಕು ಎಂದರು.

 ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಚಿವ ಹಾಲಪ್ಪ ಆಚಾರ್, ಸಂಸದ ಪಿ.ಸಿ.ಮೋಹನ್,ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ

ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು. 

Published On: 04 December 2022, 10:43 AM English Summary: 5 lakh for health services for the disabled; Declaration of medical expenses: Chief Minister Basavaraja Bommai

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.