7th Pay Commission ಏಳನೇ ವೇತನ ಆಯೋಗ ಜಾರಿಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಇದೀಗ ಮತ್ತೆ ಚರ್ಚೆ ನಡೆದಿದೆ.
ಏಳನೇ (7th Pay Commission) ವೇತನ ಆಯೋಗ ಜಾರಿ ಮಾಡಬೇಕು ಎನ್ನುವುದು ಸರ್ಕಾರಿ ನೌಕರರ ಹಲವು ತಿಂಗಳ ಬೇಡಿಕೆಯಾಗಿದೆ.
ಇದೀಗ 7ನೇ ವೇತನ ಆಯೋಗಕ್ಕೆ (7th Pay Commission) ಸಂಬಂಧಿಸಿದಂತೆ 7ನೇ ವೇತನ ಆಯೋಗದ
ಅಧ್ಯಕ್ಷ ಸುಧಾಕರ್ ರಾವ್ (7th Pay Commission Chairman Sudhakar Rao )
ಹಾಗೂ ಸದಸ್ಯರ ನಿಯೋಗದವರು ಇಂದು ಮುಖ್ಯಮಂತ್ರಿ Siddaramaiah ಅವರನ್ನು ಭೇಟಿಯಾಗಿ ಚರ್ಚಿಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.
ಈ ಹಂತದಲ್ಲಿ ಏಳನೇ ವೇತನ ಆಯೋಗದ ಅಧ್ಯಕ್ಷರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು
ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.
13.5 ಲಕ್ಷ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 7ನೇ ವೇತನ ಆಯೋಗ ರಚನೆಗೆ ಅಸ್ತು!
ಏಳನೇ ವೇತನ ಆಯೋಗ ಜಾರಿ ಏನೆಲ್ಲ ನಡೆದಿತ್ತು ?
ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಲವು ವಿಷಯಗಳು ಚರ್ಚೆ ನಡೆದಿತ್ತು.
ಅಲ್ಲದೇ ರಾಜ್ಯದ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ (pay commission)
ಆಯೋಗ ರಚನೆ ಮಾಡಿ ಬಸವರಾಜ ಬೊಮ್ಮಾಯಿ ಅವರು ಆದೇಶ ಮಾಡಿದ್ದರು.
ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದಲ್ಲಿ 7ನೇ ವೇತನ (pay commission)
ಆಯೋಗ ಸಮಿತಿ ರಚಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದರು.
Share your comments