ಆತ್ಮ ಯೋಜನೆಯಡಿ 2020-21ನೇ ಸಾಲಿನಲ್ಲಿ ಜಿಲ್ಲಾ ಮಟ್ಟದ ಶ್ರೇಷ್ಠ ಗುಂಪು ಪ್ರಶಸ್ತಿ, ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳಿಗಾಗಿ ಕಲಬುರಗಿ ಜಿಲ್ಲೆಯ 7 ತಾಲೂಕುಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೆಶಕರು ತಿಳಿಸಿದ್ದಾರೆ.
ಶ್ರೇಷ್ಠ ಗುಂಪು ಪ್ರಶಸ್ತಿಗಾಗಿ ಆಸಕ್ತ ಗುಂಪು ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ರೈತರ ಉನ್ನತಿಗಾಗಿ ಕೆಲಸ ಮಾಡುತ್ತಿರಬೇಕು. ಕಳೆದ ಮೂರು ವರ್ಷಗಳಲ್ಲಿ ಕೃಷಿ ಇಲ್ಲವೇ ಕೃಷಿ ಸಂಬಂಧಿತ ಇಲಾಖೆಗಳಿಂದ ಸಂಯೋಜಿತವಾಗಿ ಅವುಗಳ ಸವಲತ್ತುಗಳನ್ನು ಪಡೆದುಕೊಂಡಿರಬೇಕು. ಆಸಕ್ತ ಗುಂಪುಗಳು ಯಾವುದೇ ರೀತಿಯ ರಾಜ್ಯ ಮಟ್ಟದ ಇಲ್ಲವೇ ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ಸ್ವೀಕರಿಸಬಾರದು.
ಶ್ರೇಷ್ಠ ಕೃಷಿ ಪ್ರಶಸ್ತಿಗಾಗಿ ಕೃಷಿ ಕ್ಷೇತ್ರದಲ್ಲಿ ಗಮನಾರ್ಹ/ವಿಶಿಷ್ಠ ಸಾಧನೆಯನ್ನು ಮಾಡಿರಬೇಕು. ಅವರ ಸಂಶೋಧನೆಗಳು, ಸಾಧನೆಗಳು ವ್ಯಾಪಕವಾಗಿ ಅಳವಡಿಸಲು ಕೃಷಿ ಕ್ಷೇತ್ರದ ಏಳಿಗೆಗೆ ಪೂರಕವಾಗಿರಬೇಕು. ಅಭ್ಯರ್ಥಿಗಳು ಮಾಡಿರುವ ಸಾಧನೆಯ ಮೂಲ ಸ್ವರೂಪವಾಗಿದ್ದು, ಬೇರೆಯವರು ಮಾಡಿರುವ ಸಾಧನೆಗಿಂತ ಭಿನ್ನವಾಗಿರಬೇಕು. ರೈತರು ಕೃಷಿ ಹಾಗೂ ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿಕೊಂಡಿರಬೇಕು.
ರಾಜ್ಯ, ಕೇಂದ್ರ ಸರ್ಕಾರದ ವಿವಿಧ ಇಲಾಖೆ ಮತ್ತು ಅಂಗ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ/ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಪ್ರಶಸ್ತಿಗೆ ಆಯ್ಕೆ ಮಾಡುವಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಟ ಕೃಷಿಕ ಪ್ರಶಸ್ತಿ ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ.
ಪ್ರಶಸ್ತಿಗಾಗಿ ರೈತರು ನಾಮನಿರ್ದೇಶನಗಳ ನಿಗದಿತ ಅರ್ಜಿ ನಮೂನೆಯನ್ನು ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು ಡಿಸೆಂಬರ್ 15 ರೊಳಗಾಗಿ ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ಅಥವಾ ತಾಲೂಕಾ ತಾಂತ್ರಿಕ ಅಧಿಕಾರಿಗಳಿಗೆ ಕಡ್ಡಾಯವಾಗಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರು ಕಚೇರಿ ಹಾಗೂ ತಾಲೂಕ ತಾಂತ್ರಿಕ ವ್ಯವಸ್ಥಾಪಕರನ್ನು ಸಂಪರ್ಕಿಸಲು ಕೋರಲಾಗಿದೆ.
ಆಳಂದ: ಸಂಜಯ ಕುಮಾರ ಮೊಬೈಲ್ ಸಂಖ್ಯೆ 9481880805, ಆಫಜಲಪುರ: ಅನೀತಾ ಇವರ ಮೊಬೈಲ್ ಸಂಖ್ಯೆ 8095094038, ಜೇವರ್ಗಿ: ಬಸವರಾಜ ಮೊಬೈಲ್ ಸಂಖ್ಯೆ 9902182092, ಕಲಬುರಗಿ: ಶಿವರಾಯ ಮೊಬೈಲ್ ಸಂಖ್ಯೆ 9900383618, ಸೇಡಂ: ಬಾಲರಾಜ ಇವರ ಮೊಬೈಲ್ ಸಂಖ್ಯೆ 9480294584, ಚಿತ್ತಾಪೂರ: ಸಂಗೀತಾ ಪಾಟೀಲ ಇವರ ಮೊಬೈಲ್ ಸಂಖ್ಯೆ 9900749798 ಹಾಗೂ ಚಿಂಚೋಳಿ: ರವೀಂದ್ರ ರೆಡ್ಡಿ ಇವರ ಮೊಬೈಲ್ ಸಂಖ್ಯೆ 9036877777 ಗೆ ಸಂಪರ್ಕಿಸಬಹುದು.
Share your comments