1. ಸುದ್ದಿಗಳು

284 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ-ಇಂದೇ ಆನ್‌ಲೈನ್‌ ಅರ್ಜಿ ಸಲ್ಲಿಸಿ

ರಾಜ್ಯದ ಗದಗ, ಹಾಸನ, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ಅಂಗನವಾಡಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ:

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಟ ಹತ್ತನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು.  ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 4ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು.

ಹಾಸನ ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳು

1) ಅಂಗನವಾಡಿ ಕಾರ್ಯಕರ್ತೆ: 21

2) ಅಂಗನವಾಡಿ ಸಹಾಯಕಿ: 80

ಹಾಸನ ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿದೆ.

ದಕ್ಷಿಣ ಕನ್ನಡ

1) ಅಂಗನವಾಡಿ ಕಾರ್ಯಕರ್ತೆ: 15

2) ಅಂಗನವಾಡಿ ಸಹಾಯಕಿ: 45

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು 06/02/2021 ಕೊನೆಯ ದಿನವಾಗಿರುತ್ತದೆ. 

ಗದಗ

1) ಅಂಗನವಾಡಿ ಕಾರ್ಯಕರ್ತೆ: 20

2) ಅಂಗನವಾಡಿ ಸಹಾಯಕಿ: 103

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು 08/02/2021 ಕೊನೆಯ ದಿನವಾಗಿರುತ್ತದೆ.

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು :

ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿ (ಆನ್‌ಲೈನ್‌ ),  ಜನನ ಪ್ರಮಾಣ ಪತ್ರ /ಜನ್ಮದಿನಾಂಕ ಇರುವ ಎಸ್ಎಸ್‌ಎಲ್‌ಸಿ ಅಂಕಪಟ್ಟಿ ,  ತಹಶೀಲ್ದಾರರು /ಉಪತಹಶೀಲ್ದಾರರು ಪಡೆದ 1 ವರ್ಷದೊಳಗಿನ ವಾಸಸ್ಥಳ ದೃಢೀಕರಣ,  ಅಗತ್ಯ ಶೈಕ್ಷಣಿಕ ದಾಖಲೆ ಪತ್ರಗಳುನ್ನು ಲಗತ್ತಿಸಬೇಕು.

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು. ಈ ಮುಂದಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವೆಬ್‌ಸೈಟ್‌: https://anganwadirecruit.kar.nic.in ಅರ್ಜಿ ಸಲ್ಲಿಸಬಹುದು.

Published On: 09 January 2021, 04:50 PM English Summary: Application invited for recruitment of anganawadi assistant posts

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.