ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 4000 ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 26ರೊಳಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗಿ ಅಭ್ಯರ್ಥಿಗೆ ಕನಿಷ್ಟ 19 ರಿಂದ ಗರಿಷ್ಟ 25 ವಯೋಮಾನದೊಳಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಠ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು.
ವಿದ್ಯಾರ್ಹತೆ: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 26 ಜೂನ್ 2021ಕ್ಕೆ ಅನ್ವಯವಾಗುವಂತೆ ಪಿಯುಸಿ ಪಾಸಾಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು
ವೇತನ ಶ್ರೇಣಿ: ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅನುಸಾರವಾಗಿ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ 23,500 ರೂಪಾಯಿಯಿಂದ 47,670 ರೂಪಾಯಿಯವರೆಗೆ ವೇತನವಿರುತ್ತದೆ.
ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ನಡೆಯಲಿದೆ. ದೇಹದಾರ್ಡತೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳು 400 ರೂಪಾಯಿ, ಪ.ಜಾ., ಪಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 200ರೂಪಾಯಿ ಪಾವತಿಸಬೇಕು.
ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ https://recruitment.ksp.gov.in/ ಗೆ ಭೇಟಿ ನೀಡಿ ಕೇಳಲಾದ ಶೈಕ್ಷಣಿಕ ದಾಖಲಾತಿ, ಜಾತಿ,ಆದಾಯ ಪ್ರಮಾಣ ಪತ್ರಗಳೊಂದಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇದೇ ತಿಂಗಳ ಜೂನ್ 26 ರೊಳಗೆ ಅರ್ಜಿ ಸಲ್ಲಿಸಬೇಕು.
Share your comments