ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ 2020-21 ನೇ ಸಾಲಿಗೆ ಮೆಟ್ರಿಕ ಪೂರ್ವ, ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಿಳಿಸಿದೆ.
ಒಂದನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ, ಪ್ರಥಮ ಪಿ.ಯು.ಸಿ. ಯಿಂದ ಪಿ.ಎಚ್.ಡಿ. ವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ವೃತ್ತಿಪರ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೆರಿಟ್-ಕಂ-ಮೇನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬಹುದು.
ಅರ್ಹ ವಿದ್ಯಾರ್ಥಿಗಳು www.scholarships.gov.in ನ್ಯಾಷನಲ್ ಸ್ಕಾಲರ್ಶಿಫ್ ಪೋರ್ಟಲ್ದಲ್ಲಿ ಆನ್ಲೈನ್ ಮೂಲಕ ಅಕ್ಟೋಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ www.gokdom.kar.nic.in ಅಥವಾ www.dom.karnataka.gov.in ಅಥವಾ ಆಯಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕಚೇರಿಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ತಿಳಿಸಲಾಗಿದೆ.
Share your comments