ಕೃಷಿ ಇಲಾಖೆ ವತಿಯಿಂದ 2020-21ನೇ ಸಾಲಿನ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಕೃಷಿ ಪ್ರಶಸ್ತಿಗೆ ರಾಗಿ (ಮಳೆಯಾಶ್ರಿತ) ಬೆಳೆಯಲ್ಲಿ ಸುಧಾರಿತ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ಹೆಚ್ಚು ಇಳುವರಿ ಪಡೆದ ರೈತರಿಂದ ಅರ್ಜಿ ಆಹ್ವಾನಿಸಿದೆ.
ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಕೃಷಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಎಲ್ಲಾ ಮಟ್ಟಗಳಿಗೂ ಅನ್ವಯವಾಗುವಂತೆ ರೈತರುಗಳು ಒಂದೇ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬಹುದು. ಆಸಕ್ತರು ಪ್ರವೇಶ ಶುಲ್ಕ, ಪಹಣಿ ಮತ್ತು ಅಗತ್ಯ ದಾಖಲಾತಿಗಳನ್ನು ಸಂಬಂಧಪಟ್ಟ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ.
ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು.
Share your comments