ನಾವೆಲ್ಲ ಬಹುಪಾಲು ರೈತರ ಪ್ರತಿಭಟನೆಗಳನ್ನು ಕಂಡು ಕೇಳಿದ್ದೇವೆ. ಆದರೆ, ಬೆಳಗಾವಿಯಲ್ಲಿ ರೈತರು ಅಧಿಕಾರಿಗಳನ್ನು ಕೂಡಿ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಘಟಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗೋವಿಂದ ಕೊಪ್ಪದ ನೇತೃತ್ವದಲ್ಲಿ ರೈತರು ಬೆಳಗಾವಿಯ ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ಬೆಳಗಾವಿಯ ಕ್ಲಬ್ ರಸ್ತೆಯಲ್ಲಿನ ನೀರಾವರಿ ಇಲಾಖೆಗೆ ಮುತ್ತಿಗೆ ಹಾಕಿದ್ದ ರೈತರು ತಡರಾತ್ರಿವರೆಗೂ ನೀರಾವರಿ ಇಲಾಖೆ ಕಚೇರಿಯಲ್ಲಿಯೇ ಇಂಜಿನಿಯರ್‌ಗಳು ಸೇರಿ ಅಧಿಕಾರಿಗಳನ್ನು ಕೂಡಿ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿರಿ:
ನಿಮ್ಮ ದನ-ಕರುಗಳಿಗೆ ಚರ್ಮ ರೋಗ ಇದೆಯೇ? ಇದನ್ನು ಓದಿ
ಘಟಪ್ರಭಾ ಬಲದಂಡೆ ಕಾಲುವೆಗೆ ಪ್ರತಿದಿನ ಎರಡು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಪಟ್ಟು ಹಿಡಿದರು. ಸಮರ್ಪಕ ನೀರು ಇಲ್ಲದೆ ಗೋಕಾಕ್, ಮೂಡಲಗಿ ತಾಲೂಕಿನ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗುತ್ತಿದೆ. ಹೀಗಾಗಿ ತಕ್ಷಣವೇ ಕಾಲುವೆಗೆ ನೀರು ಹರಿಸುವಂತೆ ಪಟ್ಟು ಹಿಡಿದರು.
ಸ್ಥಳಕ್ಕೆ ಎಸಿಪಿ ಸದಾಶಿವ ಕಟ್ಟಿಮನಿ, ಸಿಪಿಐ ಮಂಜುನಾಥ ಹಿರೇಮಠ ಆಗಮಿಸಿ ಧರಣಿ ನಿರತರ ಮನವೊಲಿಸಲು ಹರಸಾಹಸ ಪಟ್ಟರು. ಬಳಿಕ ಅಧಿಕಾರಿಗಳು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತುಕತೆ ನಡೆಸಿ ಧರಣಿ ನಿರತರ ಮನವೊಲಿಸಿದರು. ಕಾಲುವೆಗೆ ನೀರು ಬಿಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದು ರೈತರು ವಾಪಸ್ ಆಗಿದ್ದಾರೆ.
50 ಲೀ. ವರೆಗೆ ಹಾಲು ನೀಡುವ ದೇಸಿ ತಳಿಯ ಹಸುಗಳು! ರೈತರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ.
ಮೇಕೆ ಸಾಕಾಣಿಕೆಗೆ ಲಾಭದಾಯಕವಾದ ತಳಿಗಳು ಯಾವು..? ಇಲ್ಲಿದೆ ಮಾಹಿತಿ
ನೀರು ಬಿಡದಿದ್ರೆ ಎಸಿಪಿ ಕಚೇರಿಗೆ ಮುತ್ತಿಗೆ ಹಾಕ್ತೀವಿ
ಘಟಪ್ರಭಾ ಬಲದಂಡೆ ಕಾಲುವೆಗೆ ಎರಡು ಸಾವಿರ ಕ್ಯೂಸೆಕ್ ನೀರು ಬಿಡಲು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿದ್ದೆವು. ಏ.22ರಂದು ಜಿ.ಪಂ.ಸಿಇಒ ಸೇರಿ ಇತರ ಅಧಿಕಾರಿಗಳಿಗೂ ಮನವಿ ಮಾಡಿದ್ದೆವು. ಮನವಿ ನೀಡಿದರೂ ನೀರು ಬಿಡಲಿಲ್ಲ ಬಳಿಕ ಕಚೇರಿಗೆ ಆಗಮಿಸಿ ಒತ್ತಾಯಿಸಿದಾಗ ಎರಡು ದಿನ ನೀರು ಹರಿಸಿ ಈಗ ಮತ್ತೆ ಬಂದ್ ಮಾಡಿದ್ದಾರೆ.
ಯಾದವಾಡ, ಕುಲಗೋಡ, ಕೌಜಲಗಿ, ಹೊನಕುಪ್ಪಿ ಸೇರಿ ಹಲವು ಗ್ರಾಮಗಳಲ್ಲಿ ಜನ ಜಾನುವಾರುಗೆ ಕುಡಿಯುವ ನೀರಿನ ಸಮಸ್ಯೆ ಆಗುತ್ತಿದೆ. ಪ್ರತಿ ವರ್ಷ ಎರಡು ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿತ್ತು. ಅಧಿಕಾರಿಗಳು ಒಬ್ಬರೊಬ್ಬರ ಮೇಲೆ ಆರೋಪ ಮಾಡುತ್ತಾ ಬೇಜವಾಬ್ದಾರಿ ವರ್ತನೆ ತೋರುತ್ತಿದ್ದಾರೆ ಅಂತಾ ಆಕ್ರೋಶ ವ್ಯಕ್ತಪಡಿಸಿದರು.
ಕುರಿ, ಮೇಕೆ ಸಾಕಾಣಿಕೆದಾರರಿಗೆ ಭೀತಿ ಹುಟ್ಟಿಸಿದ ಹಿರೇಬೇನೆ..ಈ ರೋಗದ ತಡೆಗಟ್ಟುವಿಕೆ ಹೇಗೆ..?
Share your comments