ತಮಿಳುನಾಡಿಗೆ ನೀರು ಹರಿಸುವ ವಿಚಾರವಾಗಿ ಇಂದು ಬೆಂಗಳೂರು ಬಂದ್ ನಡೆದಿದೆ.
ಈ ನಡುವೆ ಹೋರಾಟಗಾರರ ವಶಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತೀವ್ರ ಕಿಡಿಕಾರಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ರಾಜಕೀಯ ಮಾಡುತ್ತಿದ್ದಾರೆ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಬೀದಿಗೆ ಇಳಿದ ಹೋರಾಟಗಾರರನ್ನು
ಸರ್ಕಾರ ನಡೆಸಿಕೊಂಡ ಕ್ರಮಕ್ಕೆ ವಿರೋಧ ಪಕ್ಷಗಳು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿವೆ.
ಈ ಸಂಬಂಧ ಏಕ್ಸ್‌ನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು, ಇದೆಂಥಾ ಚೋದ್ಯ?
ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು,
ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು
@INCKarnataka ಸರಕಾರದ ಕಿಡಿಗೇಡಿತನದ ಪರಮಾವಧಿ.
ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ ಎಂದಿದ್ದಾರೆ.
ಅಲ್ಲದೇ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ
ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗರನ್ನು ಬಂಧಿಸಿರುವುದು ಖಂಡನೀಯ.
ಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ?
ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು.
ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು
ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ ಎಂದು ಹೇಳಿದ್ದಾರೆ.
Share your comments