1. ಸುದ್ದಿಗಳು

ಕಾವೇರಿ ನೀರು ಹಂಚಿಕೆ: ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡುವಂತಿದೆ: ಎಚ್‌. ಡಿ ಕುಮಾರಸ್ವಾಮಿ

Hitesh
Hitesh
Cauvery Water Sharing: Kannadigas' Patience Tested: HDK

ಕಾವೇರಿ ನೀರು ಹಂಚಿಕೆಯ ವಿಚಾರದಲ್ಲಿ ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸುವ ಕೆಲಸವಾಗುತ್ತಿದೆ ಎಂದು ಮಾಜಿ

ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ಮುಖಂಡ ಎಚ್‌.ಡಿ ಕುಮಾರಸ್ವಾಮಿ (HD Kumaraswamy ) ಕಿಡಿ ಕಾರಿದ್ದಾರೆ. 

ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ.

ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ

ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ

ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ನಮ್ಮದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ, ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ.

ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ.

ಕಾವೇರಿ ಕೊಳ್ಳದ ರೈತರ ಒಂದು ಬೆಳೆಗೂ ಸಮರ್ಪಕವಾಗಿ ನೀರು ಹರಿದಿಲ್ಲ.

ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕನ್ನಡಿಗರೂ ಮನುಷ್ಯರು, ಅವರಿಗೂ ಅನ್ನ ನೀರು ಬೇಕು.

ಅವರೂ ಈ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಸಮಿತಿ ಮರೆತಿರುವಂತಿದೆ. ಸರಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ.

ಈ ಆದೇಶವನ್ನು ದಿಕ್ಕರಿಸುವ ಎದೆಗಾರಿಕೆ ಸರಕಾರಕ್ಕೆ ಇಲ್ಲ.

ಜನರು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು, ಜನರ ಜತೆ ನಾವಿದ್ದೇವೆ, ನಮ್ಮ ಪಕ್ಷವೂ ಇದೆ ಎಂದಿದ್ದಾರೆ.  

ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ. ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ.

ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ

ಎನ್ನುವ ಮನಸ್ಥಿತಿಯಲ್ಲಿ ರಾಜ್ಯ Indian National Congress - Karnataka ಸರಕಾರ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Published On: 13 October 2023, 02:19 PM English Summary: Cauvery Water Sharing: Kannadigas' Patience Tested: HDK

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.