1. ಸುದ್ದಿಗಳು

ಕೊರೋನಾ ಪರಿಣಾಮ: ಸಿಬಿಎಸ್ಇ, ಐಸಿಎಸ್ಇಯ 10, 12ನೇ ತರಗತಿ ಪರೀಕ್ಷೆ ರದ್ದು

CBSE Exam

ಜುಲೈ 1 ರಿಂದ 15 ರವರೆಗೆ ನಡೆಯಬೇಕಿದ್ದ ಸಿಬಿಎಸ್ಇ ಪಠ್ಯಕ್ರಮದ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಜುಲೈ 1 ರಿಂದ 15 ರ ವರೆಗೆ 12 ನೇ ತರಗತಿಯ ಪರೀಕ್ಷೆಗಳನ್ನು ನಡೆಸಲು ಸಿಬಿಎಸ್‌ಇ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸುವಂತೆ ಕೋರಿ ಕೆಲ ಪೋಷಕರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಆಂತರಿಕ ಮೌಲ್ಯಮಾಪನ ಮತ್ತು ಪ್ರಾಯೋಗಿಕ ಪರೀಕ್ಷೆಗಳ ಆಧಾರದಲ್ಲಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಬೇಕೆಂದೂ ಈ ಅರ್ಜಿದಾರರು ಮನವಿ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಈ ಕುರಿತು ನಿಮ್ಮ ನಿರ್ಧಾರ ತಿಳಿಸುವಂತೆ ಸಿಬಿಎಸ್ಇ ಮತ್ತು ಐಸಿಎಸ್ಇಗೆ ಸೂಚನೆ ನೀಡಿದ್ದರಿಂದ ಗುರುವಾರ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಇಂದು ಕೇಂದ್ರ ಸರ್ಕಾರದ ಪರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೊವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ, ಮಹಾರಾಷ್ಚ್ರ ಮತ್ತು ತಮಿಳುನಾಡು ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಹೇಳಿವೆ. ಹೀಗಾಗಿ ಸಿಬಿಎಸ್ಇ ಜುಲೈ 1ರಿಂದ 15ರ ವರೆಗೆ ನಿಗದಿಯಾಗಿದ್ದ 12ನೇ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಪರೀಕ್ಷೆಯನ್ನು  ಆಯ್ಕೆ ಮಾಡಿಕೊಂಡಿರುವ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ವಿದ್ಯಾರ್ಥಿಗಳು ಬೇಕಿದ್ದರೆ, ಅಸೆಸಮೆಂಟ್ ಸ್ಕೀಂ ಅನ್ನೂ ಆರಿಸಿಕೊಳ್ಳಬಹುದು. ಅದಕ್ಕೆ ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೇಹ್ತಾರವರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

12ನೇ ತರಗತಿ ವಿದ್ಯಾರ್ಥಿಗಳಿಗೆ ಕಳೆದ ಮೂರು ಶಾಲಾ ಪರೀಕ್ಷೆಗಳ ಫಲಿತಾಂಶದ ಆಧಾರದ ಮೇಲೆ ವಾರ್ಷಿದ ಪರೀಕ್ಷೆಯ ಫಲಿತಾಂಶ ನೀಡಲಾಗುವುದು ಎಂದು ಸಿಬಿಎಸ್ಇ ಸುಪ್ರಿಂಕೋರ್ಟ್‌ಗೆ ತಿಳಿಸಿದೆ.

Published On: 25 June 2020, 07:50 PM English Summary: CBSE cancels ICSE 10th and 12th class examination

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.