1. ಸುದ್ದಿಗಳು

ಬೆಣ್ಣೆತೋರಾ ಜಲಾಶಯದಿಂದ ನದಿಗೆ ನೀರು ಬಿಡುವ ಸಂಭವ:ನದಿಯ ಅಕ್ಕಪಕ್ಕದ ಜನರು ಎಚ್ಚರಿಕೆಯಿಂದಿರಲು ಸೂಚನೆ

dam

ಬೆಣ್ಣೆತೋರಾ ಯೋಜನೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ನಿರಂತರಬಾಗಿ ಒಳಹರಿವು ಬರುತ್ತಿದೆ. ಅಲ್ಲದೇ ಮೇಲ್ಭಾಗದ ಜಲಾಯಶದಿಂದ ನೀರು ಬಿಡುವ ಸಂಭವವಿರುವುದರಿಂದ ಈ ಜಲಾಶಯವು ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಹಂತದಲ್ಲಿದೆ.

ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆ ಕೋಡಿ ಮುಖಾಂತರ ನದಿಗೆ ಹರಿಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಹೆಬ್ಬಾಳ ಬೆಣ್ಣೆತೋರಾ ಯೋಜನೆ ವಿಭಾಗದ-4ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಆದ್ದರಿಂದ ಬೆಣ್ಣೆತೋರಾ ನದಿ ಸುತ್ತಮುತ್ತಲಿನ ಗ್ರಾಮಗಳು ನದಿ ಪ್ರವಾಹದಿಂದ ತೊಂದರೆ ಉಂಟಾಗಬಹುದಾಗಿದೆ. ನದಿಯ ಅಕ್ಕಪಕ್ಕದ ಜನರು, ಸಾರ್ವಜನಿಕರು ನದಿಯಲ್ಲಿ ಇಳಿದು ಈಜುವುದಾಗಲಿ, ಬಟ್ಟೆ ಒಗೆಯುವುದಾಗಲಿ, ದನಕರುಗಳಿಗೆ ನೀರು ಕುಡಿಸುವುದಾಗಲಿ ಹಾಗೂ ಇನ್ನಿತರ ಯಾವುದೇ ಕಾರಣಕ್ಕಾಗಿ ನದಿಯಲ್ಲಿ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ನದಿಯ ಪಾತ್ರದಲ್ಲಿರುವ ಸಣ್ಣ ನೀರಾವರಿ ಮತ್ತು ಇನ್ನಿತರ ಯಾವುದೇ ಇಲಾಖೆಗಳಿಗೆ ಸಂಬಂಧಪಟ್ಟ ಆಸ್ತಿಗಳಿದ್ದಲ್ಲಿ ಮುಂಜಾಗೃತೆಯಾಗಿ ಸುರಕ್ಷಿತ ಕ್ರಮಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.    

ಮುಂಗಾರು ಆರಂಭವಾಗಿದ್ದರಿಂದ ಇತ್ತೀಚೆಗೆ ಚಿಂಚೋಳಿ ತಾಲೂಕಿನ ಸುತ್ತಮುತ್ತ ಹೆಚ್ಚು ಮಳೆಯಾಗುತ್ತಿದೆ. ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಬೆಣ್ಣೆತೊರಾ ಜಲಾಶಯದಿಂದ ನದಿಗೆ ನೀಡುವ ಬಿಡುವ ಸಂಭವ ಹೆಚ್ಚಿರುತ್ತದೆ. ಸಾರ್ವಜನಿಕರು ತಮ್ಮ ಜಾನುವಾರುಗಳನ್ನು ನದಿ ದಡಕ್ಕೆ ಬಿಡಬಾರದು. ಜನರು ಸಹ ನದಿಯ ದಂಡೆಗೆ ಇಳಿಯಬಾರದೆಂದು ಅಧಿಕಾರಿ ತಿಳಿಸಿದ್ದಾರೆ.

Published On: 11 June 2021, 09:40 PM English Summary: Chances of being released from beennatora dam into river

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.