ಸಾಲ ಮರುಪಾವತಿಯನ್ನು ಮಾಡದ ರೈತರ ಅಸ್ತಿ-ಪಾಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದನ್ನು ನಿಷೇಧಿಸಲು ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಇದನ್ನೂ ಓದಿರಿ: ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನ, ₹ 3.50ಲಕ್ಷ ಸಹಾಯಧನ!
ಸಾಲ ಮಾಡಿದ ರೈತರ ಆಸ್ತಿ ಮುಟ್ಟುಗೋಲು ಹಾಕಲು ಬಿಡಲ್ಲ. ಸಿಎಂ ಬೊಮ್ಮಾಯಿ ಈಗಾಗಲೇ ಈ ಬಗ್ಗೆ ಕ್ರಮಕ್ಕೆ ಚಿಂತನೆ ನಡೆಸಿದ್ದಾರೆ. ರೈತರು ನೆಮ್ಮದಿಯಿಂದ ಇದ್ದಾಗ ನಾವು ಬದುಕಲು ಸಾಧ್ಯ. ರೈತ ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಸಿಗಬೇಕಿದೆ.
ನಮ್ಮ ಸರ್ಕಾರದಿಂದ ರೈತರ ಸರ್ವತೋಮುಖ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ.
ಸಿರಿಗೆರೆಯಲ್ಲಿ ತರಳಬಾಳು ಜಗದ್ಗುರು ಲಿಂ. ಶ್ರೀ ಶಿವಕುಮಾರ ಶ್ರೀಗಳ 30ನೇ ವರ್ಷದ ಶ್ರಲ್ಯಾಂಜಲಿ ಸಮಾರಂಭದಲ್ಲಿ ಶನಿವಾರ ಮಾತನಾಡಿದ ಅವರು ಈ ಕುರಿತು ಆದೇಶ ಹೊರಡಿಸಲಾಗುವುದು ಎಂದರು.
ರಾಜ್ಯದ ಜನತೆಗೆ ಮತ್ತೆ ಬೆಲೆ ಏರಿಕೆಯ ಶಾಕ್, ವಿದ್ಯುತ್ ದರ ಹೆಚ್ಚಳಕ್ಕೆ ನಿರ್ಧಾರ!
ಸಾಲ ಪಡೆದ ಕೃಷಿಕರು ಅನುಭವಿಸುತ್ತಿರುವ ಕಿರುಕುಳ ಗಮನಕ್ಕಿದೆ. ರೈತವಿರೋಧಿ ನೀತಿಗಳನ್ನು ಕೈ ಬಿಡಲು ಕಾನೂನಿನ ಬಲ ಒದಗಿಸಿ ಸಾಲ ತೀರಿಸಲು ಅವಕಾಶ ಕಲ್ಪಿಸಲಾಗುವುದು ಎಂದರು.
ಹಣಕಾಸು ಸಂಸ್ಥೆಗಳು ರೈತರಿಗೆ ನೋಟಿಸ್ ನೀಡುವುದು, ಅವರ ಮನೆ, ಆಸ್ತಿ ಮುಟ್ಟುಗೋಲು ಹಾಕಿ ಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದ 14 ಲಕ್ಷ ರೈತರ ಮಕ್ಕಳು ಮುಖ್ಯಮಂತ್ರಿ ವಿದ್ಯಾನಿಧಿ ಯೋಜನೆ ಫಲಾನುಭವಿಗಳಿದ್ದಾರೆ, ಕೃಷಿ ಕಾರ್ಮಿಕರು ನೇಕಾರರು, ಮೀನುಗಾರರು, ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳು ಸೇರಿ ಎಲ್ಲ ಶ್ರಮಿಕ ವರ್ಗದವರ ಮಕ್ಕಳಿಗೆ ಈ ಯೋಜನೆ ವಿಸ್ತರಿಸಲಾಗುವುದು ಎಂದು ತಿಳಿಸಿದರು.
ಸರ್ಕಾರದಿಂದ ಗುಡ್ನ್ಯೂಸ್: ಇನ್ಮುಂದೆ ಡ್ರೈವಿಂಗ್ ಲೈಸೆನ್ಸ್ ಪಡೆಯಲು RTOಗೆ ಹೋಗಬೇಕಿಲ್ಲ!
ರೈತರಿಗೆ ಕಿರುಕುಳ ತಪ್ಪಿಸಲು ಕ್ರಮ: ಸಾಲ ವಸೂಲು ಹೆಸರಲ್ಲಿ ರೈತರಿಗೆ ಕಿರುಕುಳ ನೀಡುವುದನ್ನು ಸರ್ಕಾರ ತಪ್ಪಿಸಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಕೆರೆ, ಕಟ್ಟೆ ತುಂಬಿವೆ, ಕೆಲವೆಡೆ ಅತಿವೃಷ್ಠಿಯಿಂದ ಬೆಳೆ ನಾಶವಾಗಿದೆ ಸೂಕ್ತ ಪರಿಹಾರ ನೀಡುವುದಾಗಿ ಸಿಎಂ ಸದನದಲ್ಲಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ದೇಶಾದ್ಯಂತ ರೈತರು ಕಟ್ಟಿದ್ದ 26 ಸಾವಿರ ಕೋಟಿ ರೂ ಬೆಳೆ ವಿಮಾ ಕಂತಿಗೆ, ಒಂದು ಲಕ್ಷ ಕೋಟಿ ರೂ. ಪರಿಹಾರ ದೊರಕಿದೆ. ಸರ್ಕಾರ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದೆ ಎಂದರು.
Share your comments