ಧಾರಾಕಾರ ಮಳೆಯಿಂದಾಗಿ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಸಮಸ್ಯೆ ಸೃಷ್ಟಿಯಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲೂ ವರ್ಷಧಾರೆ ಮುಂದುವರಿದಿದೆ.
ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಆದರೆ, ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು.
ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿರುವುದು ವರದಿ ಆಗಿದೆ.
ಭಾರೀ ಮಳೆ: ಕಳೆದ 24 ಗಂಟೆಯ ಅವಧಿಯಲ್ಲಿ ಉತ್ತರ ಕನ್ನಡದ ಕ್ಯಾಸಲ್ರಾಕ್, ಕೊಲ್ಲೂರು, ಕಾರ್ಕಳ, ಕೋಟ,
ಸಿದ್ದಾಪುರ, ಕುಮಟಾ, ಕಾರವಾರ, ಶಿರಾಲಿ, ಪಿಟಿಒ, ಗೇರುಸೊಪ್ಪು, ಧರ್ಮಸ್ಥಳ, ಸುಬ್ರಹ್ಮಣ್ಯ, ಬೆಳ್ತಂಗಡಿ, ಕೊಟ್ಟಿಗೆಹಾರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.
ಜನಮನ, ಬೇಲಿಕೇರಿ, ಸಿದ್ದಾಪುರ, ಮಂಕಿ, ಜೋಯಿಡಾ, ಹೊನ್ನಾವರ, ಗೋಕರ್ಣ, ಕುಂದಾಪುರ, ಉಡುಪಿ ಹಾಗೂ ಅಕ್ಕಿಆಲೂರು ಸೇರಿ ವಿವಿಧ ಭಾಗದಲ್ಲಿ ಮಳೆಯಾಗಿದೆ.
ಮುಂದಿನ 24 ಗಂಟೆ ಭಾರೀ ಮಳೆ: ಮುಂದಿನ 24 ಗಂಟೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಿಂಚುಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಬಹಳಷ್ಟಿದೆ.
ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುಡುಗು ಮುನ್ನೆಚ್ಚರಿಕೆ: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗು ಸಾಧ್ಯತೆ ಇದೆ.
ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಒಂದೆರಡು ಬಾರಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಗರಿಷ್ಠ ಉಷ್ಣಾಂಶವು 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Share your comments