ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಈ ತಿಂಗಳ 24 ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಒಂದು ತಿಂಗಳು ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ.
ದೇಶದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಕೃಷಿ ಬೆಳೆ ಸಮೀಕ್ಷೆ ನಡೆಸಲು ಮುಂದಾಗಿದೆ. ರೈತರು ಈ ಹಿಂದೆ ಒಂದೇ ಬೆಳೆಗಳನ್ನು ಮೊಬೈಲ್‌ಗೆ ಅಪ್‌ಲೋಡ್ ಮಾಡುತ್ತಿದ್ದುದರಿಂದ ಸಾಕಷ್ಟು ಗೊಂದಲಗಳು ಉಂಟಾಗಿದ್ದವು. ಇದನ್ನು ತಪ್ಪಿಸುವ ಸಲುವಾಗಿಯೇ ಬೆಳೆ ಸಮೀಕ್ಷೆ ಅವಧಿ ವಿಸ್ತರಿಸಲಾಗಿದೆ ಎಂದರು.
ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ ದಾಖಲೆ ಪ್ರಮಾಣದಲ್ಲಿ ಇದುವರೆಗೆ 5.90 ಲಕ್ಷ ರೈತರು ನೋಂದಣಿ ಮಾಡಿಸಿದ್ದಾರೆ, ಪ್ರತಿ ನಿಮಿಷಕ್ಕೆ ಒಂದೂವರೆ ಸಾವಿರ ರೈತರು ಆಪ್‌ಲೋಡ್ ಮಾಡುತ್ತಿದ್ದಾರೆ. 20 ರಿಂದ 25 ಲಕ್ಷಕ್ಕೂ ಹೆಚ್ಚು ರೈತರು ಬೆಳೆ ಸಮೀಕ್ಷೆ ನೋಂದಣಿ ಮಾಡಿಕೊಳ್ಳುವ ವಿಶ್ವಾಸವಿದೆ ಎಂದರು.
Share your comments