ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಸೋಮವಾರ ಹಾಗೂ ಮಂಗಳವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿರುವುದು ವರದಿ ಆಗಿದೆ.
ಇನ್ನು ಮುಂದಿನ ಐದು ದಿನಗಳ ಅವಧಿಗೆ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ
ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ
ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ
ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆ ಸೇರಿದಂತೆ ವಿವಿಧ ಭಾಗದಲ್ಲಿ
ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 36.5 ಡಿ.ಸೆ ಕಾರವಾರದಲ್ಲಿ ದಾಖಲಾಗಿದೆ.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 16.2 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.
ಮಂಗಳವಾರ ಹಾಗೂ ಬುಧವಾರ ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ
ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಾಪಮಾನ ಎಚ್ಚರಿಕೆ
ಮುಂದಿನ 48 ಗಂಟೆಗಳು: ಇಲ್ಲ
ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಗಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ;
ಉಷ್ಣಾಂಶಗಳ ಎಚ್ಚರಿಕೆ:
ಗರಿಷ್ಠ ಉಷ್ಣಾಂಶಗಳು: ರಾಜ್ಯದಾದ್ಯಂತ ಹಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 -3 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಾಗುವ ಸಾಧ್ಯತೆಯಿದೆ.
ಕನಿಷ್ಠ ಉಷ್ಣಾಂಶಗಳು: ರಾಜ್ಯದಾದ್ಯಂತ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 -3 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಾಗುವ ಸಾಧ್ಯತೆಯಿದೆ
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
ಬೆಂಗಳೂರು ಮತ್ತು ಸುತಮುತಲಿನ ಪ್ರದೇಶಗಳ ಮುನ್ಸೂಚನೆ:
ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಕೆಲವು ಕಡೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ.
ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಗರಿಷ್ಠ ಉಷ್ಣಾಂಶ 29ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು
ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಸೋಮವಾರ ಎಲ್ಲೆಲ್ಲಿ ಮಳೆಯಾಗಿದೆ ?
ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಕೊಡಗು ಜಿಲ್ಲೆಯ ನಾಪೋಕ್ಲು,
ತಾಳಗುಪ್ಪ (ಶಿವಮೊಗ್ಗ ಜಿಲ್ಲೆ) ತಲಾ 5 ಸೆಂ.ಮೀ ಮಳೆಯಾಗಿದೆ.
ಬೆಳ್ತಂಗಡಿ (ದಕ್ಷಿಣ ಕನ್ನಡ ಜಿಲ್ಲೆ), ಬಾಳೆಹೊನ್ನೂರು (ಚಿಕ್ಕಮಗಳೂರು ಜಿಲ್ಲೆ) ತಲಾ 4; ಶಿರಾಲಿ, ಸಿದ್ದಾಪುರ (ಉಡುಪಿ ಜಿಲ್ಲೆ)
ಎನ್.ಆರ್.ಪುರ (ಚಿಕ್ಕಮಗಳೂರು) ತಲಾ 3; ಪುತ್ತೂರು (ದಕ್ಷಿಣ ಕನ್ನಡ ಜಿಲ್ಲೆ), ಹೊನ್ನಾವರ, ಮಡಿಕೇರಿ
ಮೂರ್ನಾಡು (ಕೊಡಗು ಜಿಲ್ಲೆ), ಶೃಂಗೇರಿ, ಕಳಸ (ಎರಡೂ ಚಿಕ್ಕಮಗಳೂರು ಜಿಲ್ಲೆ) ತಲಾ 2;
ಉಪ್ಪಿನಂಗಡಿ, ಮಾಣಿ, ಸುಳ್ಯ, ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಉಡುಪಿ, ಕೋಟ (ಎರಡೂ ಉಡುಪಿ ಜಿಲ್ಲೆ)
ಸಿದ್ದಾಪುರ, ಗೆರ್ಸೊಪ್ಪ (ಉತ್ತರ ಕನ್ನಡ ಜಿಲ್ಲೆ), ಜಯಪುರ (ಚಿಕ್ಕಮಗಳೂರು ಜಿಲ್ಲೆ), ಸೋಮವಾರಪೇಟೆ
ಭಾಗಮಂಡಲ ವಿರಾಜಪೇಟೆ (ಎಲ್ಲಾ ಕೊಡಗು ಜಿಲ್ಲೆ), ಹುಂಚದಕಟ್ಟೆ (ಶಿವಮೊಗ್ಗ ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ)
ಹುಣಸೂರು (ಮೈಸೂರು ಜಿಲ್ಲೆ) ತಲಾ 1 ಸೆಂ. ಮೀ ಮಳೆಯಾಗಿರುವುದು ವರದಿ ಆಗಿದೆ.
Share your comments