ರಾಜ್ಯದಲ್ಲಿ ಏಪ್ರಿಲ್ 6ರಿಂದ 10ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 6ರಂದು ಹಾಸನ, ಕೊಡಗು, ಮೈಸೂರು, , ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ, ಏಪ್ರಿಲ್ 7 ರಂದು ಚಾಮರಾಜನಗರ, ಹಾಸನ, ಮೈಸೂರು,ದಕ್ಷಿಣ ಕನ್ನಡ, ಉಡುಪಿ, ಕೊಡಗು ಭಾಗದಲ್ಲಿ ಮಳೆಯಾಗಲಿದೆ. ಏಪ್ರಿಲ್ 8ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಏಪ್ರಿಲ್ 9 ಮತ್ತು 10ರಂದು ದ.ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಕೊಡಗು, ರಾಯಚೂರು, ಹಾಸನ, ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 6 ಮತ್ತು 7ರಂದು ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ. ಆಗಾಗ ತುಂತುರು ಮಳೆಯಾಗುವ ಇಲ್ಲವೆ ಗಾಳಿ ಸಮೇತ ಕೆಲ ನಿಮಿಷಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೂರು ದಿನ ಒಣಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಸೋಮವಾರ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಸುರಿಯಿತು ಮಳೆ
ಯಾದಗಿರಿ ಜಿಲ್ಲೆಯಲ್ಲಿ ಏಕಾಏಕಿ ಸೋಮವಾರ ಮಧ್ಯಾಹ್ನ ಮೋಡ ಕವಿದ ವಾತಾವರಣ ನಿರ್ಮಾಣಗೊಂಡು ಸುಮಾರು ಅರ್ಧಗಂಟೆಗಳ ಕಾಲ ಭಾರಿ ಬಿರುಗಾಳಿಯೊಂದಿಗೆ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆ ಸುರಿಯಿತು. ಗಾಳಿ ಮಳೆ ರಭಸಕ್ಕೆ ನಗರಸಭೆ ಸಭಾಂಗಣದ ಪತ್ರಾಸ್ ಗಳ ಮೇಲ್ಛಾವಣಿ ಹಾರಿಹೋಗಿದ್ದು, ಸಭಾಂಗಣದಲ್ಲಿದ್ದ ದಾಖಲೆಗಳು ನೀರಿನಲ್ಲಿ ನೆನೆದು ಹೋಗಿವೆ.
ಅದೇ ರೀತಿ ಶಹಾಪುರದಲ್ಲಿಯೂ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಕಳೆದ ಒಂದು ವಾರದಿಂದ ಬಿಸಿಲಿನ ತಾಪಕ್ಕೆ ಬೇಸತ್ತಿದ ಜನರಿಗೆ ಧರೆಗೆ ತಂಪೆರದಿದೆ
Share your comments