ರಾಜ್ಯ ಸರ್ಕಾರಿ (state government) ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ಇದನ್ನೂ ಓದಿರಿ: ತಿರುಪತಿ ತಿರುಮಲದಲ್ಲಿರುವ ಆಸ್ತಿ ಮೌಲ್ಯ ಐದು ಸಾವಿರ ಕೋಟಿ! 10.25 ಟನ್ ಬಂಗಾರ, ಒಟ್ಟಾರೆ ಆಸ್ತಿ ಎಷ್ಟು ಗೊತ್ತೆ?
ರಾಜ್ಯದ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ವೇತನ 7ನೇ ವೇತನ (pay commission) ಆಯೋಗ ರಚನೆ ಮಾಡುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಪ್ಪಿಗೆ ಸೂಚಿಸಿದ್ದಾರೆ.
ಏಳನೇ ವೇತನ (7th Pay Commission) ಆಯೋಗದ ರಚನೆಗೆ ಸಂಬಂಧಿಸಿದಂತೆ ಇನ್ನು ಎರಡೇ ದಿನಗಳಲ್ಲಿ ಆದೇಶ ಹೊರಬೀಳುವ ಸಾಧ್ಯತೆ ಇದೆ.
ರೈತರ ಖಾತೆಗೆ ನೇರವಾಗಿ ಡೀಸೆಲ್ ಸಬ್ಸಿಡಿ ಪಾವತಿ; ದಾಖಲೆಯೂ ಬೇಕಿಲ್ಲ: ಬಿ.ಸಿ ಪಾಟೀಲ್
ವೇತನ ಪರಿಷ್ಕರಣೆ ಮಾಡುವಂತೆ ರಾಜ್ಯ ಸರ್ಕಾರಿ ನೌಕರರು ನಿರಂತರವಾಗಿ ಬೇಡಿಕೆ ಇರಿಸಿದ್ದರು. ಅಲ್ಲದೇ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ನಿಯೋಗವು ಈ ಹಿಂದೆ ವೇತನ ಪರಿಷ್ಕರಣೆ ಮಾಡುವ ಸಂಬಂಧ ಚರ್ಚೆ ನಡೆಸಿತ್ತು.
ಈಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ನಿಯೋಗದೊಂದಿಗೆ ಚರ್ಚೆ ನಡೆಸಿತ್ತು. ಅಕ್ಟೋಬರ್ ಅಂತ್ಯದ ವೇಳೆಗೆ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಂತ್ರಿಯೂ ತಿಳಿಸಿದ್ದರು.
ಕಬ್ಬು ಬೆಳೆ ಬೆಳೆಯಲು ಇರುವ ಉತ್ತಮ ತಳಿಗಳ ಬಗ್ಗೆ ನಿಮಗೆಷ್ಟು ಗೊತ್ತು?
ನವೆಂಬರ್ 8ರ ಒಳಗಾಗಿ ವೇತನ ಆಯೋಗ ರಚನೆ ಮಾಡಲಾಗುವುದು. ತ್ವರಿತವಾಗಿ ಮಧ್ಯಂತರ ವರದಿ ನೀಡಲು ನಿರ್ದೇಶಿಸಲಾಗುವುದು.
2023ರ ಮಾರ್ಚ್ಒಳಗೆ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಏಳನೇ ವೇತನ ಆಯೋಗದ ಶಿಫಾರಸ್ಸಿನಿಂದಾಗಿ 13.5 ಲಕ್ಷಕ್ಕೂ ಹೆಚ್ಚು ಜನರಿಗೆ ಅನುಕೂಲವಾಗಲಿದೆ. 6 ಲಕ್ಷ ಸರ್ಕಾರಿ ನೌಕರರು (government employees),
ನಿಗಮ-ಮಂಡಳಿ, ವಿವಿಧ ಪ್ರಾಧಿಕಾರಿಗಳ ಮೂರು ಲಕ್ಷ ಮತ್ತು ಪಿಂಚಣಿ ಪಡೆಯುತ್ತಿರುವ 4.5 ಲಕ್ಷ ನಿವೃತ್ತರಿಗೆ ಏಳನೇ ವೇತನ ಆಯೋಗದ ಶಿಫಾರಸ್ಸು ಅನ್ವಯವಾಗಲಿದೆ.
ಈ ಬದಲಾವಣೆಯಿಂದಾಗಿ ಸರ್ಕಾರವು (state government) ಹೆಚ್ಚುವರಿಯಾಗಿ ಅಂದಾಜು 12,500 ಕೋಟಿ ರೂಪಾಯಿ ವ್ಯಯಿಸಬೇಕಾದ ಸಾಧ್ಯತೆ ಇದೆ.
ಸಾಲ ಪಾವತಿಸದಿದ್ದರೂ ರೈತರ ಆಸ್ತಿ ಜಪ್ತಿ ಮಾಡದಂತೆ ಕಾನೂನು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸರ್ಕಾರಿ ನೌಕರರು 1-7-2022ರಿಂದ ಅನ್ವಯವಾಗುವಂತೆ ಕಾಲ್ಪನಿಕ ಸೌಲಭ್ಯವನ್ನು ಹಾಗೂ 1-1-2023ರಿಂದ ಅನ್ವಯವಾಗುವಂತೆ ಆರ್ಥಿಕ ಸೌಲಭ್ಯ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಶೇ.40ರಷ್ಟುವೇತನ ಹೆಚ್ಚಿಸಬೇಕು ಎಂದು ಸರ್ಕಾರಿ ನೌಕರರು ಬೇಡಿಕೆ ಇರಿಸಿದ್ದಾರೆ.
ಬಸವರಾಜ ಬೊಮ್ಮಾಯಿ (Basavaraja Bommai) ಅವರು ಫೆಬ್ರವರಿಯಲ್ಲಿ ಮಂಡಿಸಲಿರುವ ಬಜೆಟ್ನಲ್ಲಿ (budget) 7ನೇ ವೇತನ ಆಯೋಗದ (7th Pay Commission) ಇದನ್ನು ಸೇರಿಸುವ ಸಾಧ್ಯತೆ ಇದೆ.
ಮುಂದಿನ ವರ್ಷ ಚುನಾವಣೆಯೂ ಇರುವುದರಿಂದ ಈ ಅಂಶ ಮಹತ್ವವನ್ನು ಪಡೆದುಕೊಂಡಿದೆ. ಮೊದಲ ಬಾರಿಗೆ ಐದು ವರ್ಷದ ಒಳಗೆ ವೇತನ ಆಯೋಗ (pay commission) ರಚನೆಯಾಗುತ್ತಿದೆ.
ಈ ಬಾರಿ ಆಯೋಗದಿಂದ ಶೇ.40ರಷ್ಟು ವೇತನ ಹೆಚ್ಚಳವಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.
ಮುಖ್ಯಮಂತ್ರಿಗಳಿಗೆ ಸನ್ಮಾನ ಕಾರ್ಯಕ್ರಮ
ಐದು ವರ್ಷಗಳಿಗೆ ಒಮ್ಮೆ ವೇತನ ಆಯೋಗ ರಚನೆ ಮಾಡಲಾಗುತ್ತದೆ. ಪ್ರಥಮ ಬಾರಿ 4 ವರ್ಷ 7 ತಿಂಗಳಿಗೆ ವೇತನ ಆಯೋಗ ರಚನೆ ಮಾಡಲು ನಿರ್ಧರಿಸಲಾಗಿದೆ.
ಚುನಾವಣೆ ನೀತಿ ಸಂಹಿತೆ ಘೋಷಿಸುವ ಮೊದಲೇ ಸರ್ಕಾರಿ ನೌಕರರಿಗೆ ಮೂಲ ವೇತನದಲ್ಲಿ ಗಣನೀಯ ಹೆಚ್ಚಳವಾಗಲಿದೆ.
ಇದಕ್ಕೆ ಕಾರಣರಾಗಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ರಾಜ್ಯದ ಎಲ್ಲ ಸರ್ಕಾರೊ ನೌಕರರ ಪರವಾಗಿ ನವೆಂಬರ್ 10ಕ್ಕೆ ಅವರ ಬೆಂಗಳೂರು ನಿವಾಸದಲ್ಲಿ ಸನ್ಮಾನಿಸಲಾಗುವುದು ಎಂದು ಷಡಾಕ್ಷರಿ ಅವರು ತಿಳಿಸಿದ್ದಾರೆ.
Share your comments