1. ಸುದ್ದಿಗಳು

ಹವಾಯಿ ಚಪ್ಪಲಿ ಧರಿಸಿದ ಸಾಮಾನ್ಯರು ವಿಮಾನದಲ್ಲಿ ಪ್ರಯಾಣಿಸಲು ಶ್ರಮ: ಮೋದಿ!

Hitesh
Hitesh
Hard work for ordinary people wearing Hawaiian slippers to travel by plane: Modi!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಕರ್ನಾಟಕದ ಶಿವಮೊಗ್ಗದಲ್ಲಿ 3,600 ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಿದರು.  

2023ರ ಪರೀಕ್ಷೆ ಕುರಿತು ಚರ್ಚೆ, ಎಚ್ಚರವಾಗಿದ್ದರೆ ಒತ್ತಡ ತಪ್ಪಿಸಬಹುದು: ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದರು ಹಾಗೂ ಅದರ ಸೌಲಭ್ಯಗಳನ್ನು ವೀಕ್ಷಿಸಿದರು.

ಶಿವಮೊಗ್ಗ - ಶಿಕಾರಿಪುರ - ರಾಣೆಬೆನ್ನೂರು ಹೊಸ ರೈಲು ಮಾರ್ಗ ಮತ್ತು ಕೋಟೆಗಂಗೂರು ರೈಲ್ವೇ ಕೋಚಿಂಗ್ ಡಿಪೋ ಸೇರಿದಂತೆ ಶಿವಮೊಗ್ಗದಲ್ಲಿ ಎರಡು ರೈಲ್ವೆ ಯೋಜನೆಗಳಿಗೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ನೆರವೇರಿಸಿದರು.

215 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಿರುವ ಬಹು ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಜಲ ಜೀವನ್ ಮಿಷನ್ ಅಡಿಯಲ್ಲಿ 950 ಕೋಟಿ ರೂ.ಗೂ ಹೆಚ್ಚು ಮೊತ್ತದ ಬಹುಗ್ರಾಮ ಯೋಜನೆಗಳನ್ನು ಉದ್ಘಾಟಿಸಿದರು ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.

ಶಿವಮೊಗ್ಗ ನಗರದಲ್ಲಿ 895 ಕೋಟಿ ರೂ.ಗೂ ಅಧಿಕ ಮೊತ್ತದ 44 ಸ್ಮಾರ್ಟ್ ಸಿಟಿ ಯೋಜನೆಗಳನ್ನು ಉದ್ಘಾಟಿಸಿದರು.

ಏರೋ ಇಂಡಿಯಾ ಹೊಸ ದಾಖಲೆ: ಪ್ರಧಾನಿ ನರೇಂದ್ರ ಮೋದಿ ಏನಂದ್ರು ಗೊತ್ತಾ ?

ಶಿವಮೊಗ್ಗದಲ್ಲಿ ನೂತನವಾಗಿ ಉದ್ಘಾಟನೆಗೊಂಡ ವಿಮಾನ ನಿಲ್ದಾಣವನ್ನು ಉಲ್ಲೇಖಿಸಿದ ಪ್ರಧಾನಿ, ಬಹಳ ದಿನಗಳ ನಂತರ ಇಂದು ನಾಗರಿಕರ ಅಗತ್ಯಗಳನ್ನು ಈಡೇರಿಸಲಾಗಿದೆ ಎಂದರು.

ವಿಮಾನ ನಿಲ್ದಾಣದ ಭವ್ಯವಾದ ಸೌಂದರ್ಯ ಮತ್ತು ನಿರ್ಮಾಣದ ಕುರಿತು ಪ್ರಸ್ತಾಪಿಸಿದ ಪ್ರಧಾನಮಂತ್ರಿಯವರು, ಕರ್ನಾಟಕದ ಸಂಪ್ರದಾಯಗಳು ಮತ್ತು ತಂತ್ರಜ್ಞಾನದ ಸಮ್ಮಿಲನವನ್ನು ವಿವರಿಸಿದರು. ಇದು ಕೇವಲ ವಿಮಾನ ನಿಲ್ದಾಣವಾಗದೆ ಯುವ ಪೀಳಿಗೆಯ ಕನಸುಗಳನ್ನು ನನಸಾಗಿಸುವ ಅಭಿಯಾನವಾಗಿದೆ.

ಕೃಷಿ ವಲಯಕ್ಕೆ ಹೆಚ್ಚಿನ ಆಧುನೀಕರಣದ ಅಳವಡಿಕೆ ಅಗತ್ಯ-ನರೇಂದ್ರ ಮೋದಿ

Hard work for ordinary people wearing Hawaiian slippers to travel by plane: Modi!

ಕರ್ನಾಟಕದ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಈ ಪ್ರಗತಿಯ ಹಾದಿಯು ರಸ್ತೆಮಾರ್ಗಗಳು, ವಾಯುಮಾರ್ಗಗಳು ಮತ್ತು ಐವೇ (ಡಿಜಿಟಲ್ ಸಂಪರ್ಕ) ಗಳಲ್ಲಿ ಇಡುತ್ತಿರುವ ದಾಪುಗಾಲುಗಳಿಂದ ಸುಗಮವಾಗಿದೆ ಎಂದರು.

ಕರ್ನಾಟಕದ ಡಬಲ್ ಇಂಜಿನ್ ಸರ್ಕಾರವು ಕರ್ನಾಟಕದ ಪ್ರಗತಿಯ ರಥಕ್ಕೆ ಶಕ್ತಿ ತುಂಬುತ್ತಿದೆ.

ಹಿಂದೆ ಇದ್ದ ದೊಡ್ಡ ನಗರಗಳನ್ನು ಕೇಂದ್ರೀಕರಿಸುತ್ತಿದ್ದ ಅಭಿವೃದ್ಧಿಗೆ ವಿರುದ್ಧವಾಗಿ ಡಬಲ್ ಇಂಜಿನ್ ಸರ್ಕಾರದ ಅಡಿಯಲ್ಲಿ ಕರ್ನಾಟಕದಲ್ಲಿ ಹಳ್ಳಿಗಳಿಗೆ ಮತ್ತು 2-3 ಶ್ರೇಣಿ ನಗರಗಳಿಗೆ ಅಭಿವೃದ್ಧಿಯನ್ನು ವ್ಯಾಪಕವಾಗಿಸಲಾಗಿದೆ.

ಶಿವಮೊಗ್ಗದ ಅಭಿವೃದ್ಧಿಯು ಈ ಚಿಂತನೆಯ ಫಲಿತಾಂಶವಾಗಿದೆ ಎಂದರು.

ಭಾರತದಲ್ಲಿ ವಿಮಾನ ಪ್ರಯಾಣವು ಸಾರ್ವಕಾಲಿಕ ಉತ್ತುಂಗದಲ್ಲಿರುವ ಸಮಯದಲ್ಲಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಾಗುತ್ತಿದೆ.

ಇತ್ತೀಚೆಗಷ್ಟೇ ಏರ್ ಇಂಡಿಯಾ ವಿಶ್ವದ ಅತಿ ಹೆಚ್ಚು ಪ್ರಯಾಣಿಕ ವಿಮಾನಗಳ ಖರೀದಿ ಒಪ್ಪಂದವನ್ನು ಪೂರ್ಣಗೊಳಿಸಿದೆ.

ಇಂದಿನ ಏರ್ ಇಂಡಿಯಾ ಯಶಸ್ಸಿನ ಉತ್ತುಂಗಕ್ಕೆ ಏರುತ್ತಿರುವ ನವ ಭಾರತದ ಸಾಮರ್ಥ್ಯ ಎಂದು ಗುರುತಿಸಲ್ಪಟ್ಟಿದೆ.

ರಾಜ್ಯದಲ್ಲಿ ಹೊಸ ಏರೋಸ್ಪೇಸ್‌ ನೀತಿ ಜಾರಿ: 45 ಸಾವಿರಕ್ಕೂ ಹೆಚ್ಚು ಯುವಕರಿಗೆ ವೈಮಾನಿಕ ಕ್ಷೇತ್ರದಲ್ಲಿ ಮಹಾಸಾಧನೆ!

ಭಾರತದ ವಿಮಾನಯಾನ ಮಾರುಕಟ್ಟೆಯು ವಿಸ್ತರಿಸುತ್ತಿರುವುದರ ಬಗ್ಗೆ ಗಮನ ಸೆಳೆದ ಅವರು ಮುಂದಿನ ದಿನಗಳಲ್ಲಿ ದೇಶಕ್ಕೆ ಸಾವಿರಾರು ವಿಮಾನಗಳು ಬೇಕಾಗುತ್ತವೆ.

ಅಲ್ಲಿ ಸಾವಿರಾರು ಯುವ ನಾಗರಿಕರು ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ.

ನಾವು ಇಂದು ಈ ವಿಮಾನಗಳನ್ನು ಆಮದು ಮಾಡಿಕೊಳ್ಳುತ್ತಿದ್ದರೂ ಸಹ, ಭಾರತದ ನಾಗರಿಕರು ಮೇಡ್ ಇನ್ ಇಂಡಿಯಾ ಪ್ರಯಾಣಿಕ ವಿಮಾನಗಳನ್ನು ಹಾರಿಸುವ ದಿನ ದೂರವಿಲ್ಲ ಎಂದರು.

ವಿಮಾನಯಾನ ಕ್ಷೇತ್ರದ ಅಭೂತಪೂರ್ವ ವಿಸ್ತರಣೆಗೆ ಕಾರಣವಾದ ಸರ್ಕಾರದ ನೀತಿಗಳನ್ನು ಪ್ರಧಾನಮಂತ್ರಿ ವಿವರಿಸಿದರು.

ಹಿಂದಿನ ಸರ್ಕಾರಗಳ ವಿಧಾನಕ್ಕಿಂತ ಭಿನ್ನವಾಗಿ, ಪ್ರಸ್ತುತ ಸರ್ಕಾರವು ಸಣ್ಣ ನಗರಗಳಲ್ಲಿ ವಿಮಾನ ನಿಲ್ದಾಣಗಳಿಗೆ ಒತ್ತು ನೀಡಿದೆ.

ದೇಶವು ಸ್ವಾತಂತ್ರ್ಯದ ಮೊದಲ 7 ದಶಕಗಳಲ್ಲಿ 2014 ರವರೆಗೆ 74 ವಿಮಾನ ನಿಲ್ದಾಣಗಳನ್ನು ಹೊಂದಿತ್ತು, ಆದರೆ ಕಳೆದ 9 ವರ್ಷಗಳಲ್ಲಿ 74 ಹೆಚ್ಚಿನ ವಿಮಾನ ನಿಲ್ದಾಣಗಳನ್ನು ಸೇರಿಸಲಾಯಿತು.

ಇವು ಅನೇಕ ಸಣ್ಣ ನಗರಗಳನ್ನು ಸಂಪರ್ಕಿಸುತ್ತವೆ.

ಹವಾಯಿ ಚಪ್ಪಲಿ ಧರಿಸಿದ ಸಾಮಾನ್ಯ ನಾಗರಿಕರು ಹವಾಯಿ ಜಹಾಜ್‌ನಲ್ಲಿ ಪ್ರಯಾಣಿಸಲು ಸಾಧ್ಯವಾಗಬೇಕು ಎಂಬ ತಮ್ಮ ದೃಷ್ಟಿಯನ್ನು ಸಾಕಾರಗೊಳಿಸಲು

ಕೈಗೆಟುಕುವ ವಿಮಾನ ಪ್ರಯಾಣಕ್ಕಾಗಿ ಉಡಾನ್ ಯೋಜನೆಯನ್ನು ಆರಂಭಿಸಿದ್ದನ್ನು ಪ್ರಧಾನಿ ಪ್ರಸ್ತಾಪಿಸಿದರು.  

ಜಲ ಜೀವನ್ ಮಿಷನ್ ಆರಂಭಕ್ಕೂ ಮುನ್ನ ಶಿವಮೊಗ್ಗದಲ್ಲಿ 3 ಲಕ್ಷ ಕುಟುಂಬಗಳ ಪೈಕಿ 90 ಸಾವಿರ ಕುಟುಂಬಗಳು ಮಾತ್ರ ನಲ್ಲಿ ನೀರಿನ ಸಂಪರ್ಕವನ್ನು ಹೊಂದಿದ್ದವು.

ಈಗ, ಡಬಲ್ ಇಂಜಿನ್ ಸರ್ಕಾರವು 1.5 ಲಕ್ಷ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸಿದೆ ಮತ್ತು ಸಂಪೂರ್ಣ ಗುರಿ ಸಾಧನೆಗಾಗಿ ಕೆಲಸ ನಡೆಯುತ್ತಿದೆ.

ಕಳೆದ 3.5 ವರ್ಷಗಳಲ್ಲಿ 40 ಲಕ್ಷ ಕುಟುಂಬಗಳು ನಲ್ಲಿ ನೀರಿನ ಸಂಪರ್ಕ ಪಡೆದಿವೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ,

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮತ್ತು ಕರ್ನಾಟಕ ಸರ್ಕಾರದ ಸಚಿವರು ಮತ್ತಿತರರು ಉಪಸ್ಥಿತರಿದ್ದರು. 

Published On: 28 February 2023, 02:43 PM English Summary: Hard work for ordinary people wearing Hawaiian slippers to travel by plane: Modi!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.