ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರಿನ ಅಬ್ಬರ ಮುಂದುವರೆದಿದೆ. ಆಗಸ್ಟ್ 20 ಮತ್ತು 21 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ (Heavy rain) ಯಾಗುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ.
ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಅಲ್ಲಲ್ಲಿ, ಚದುರಿದ ಮಳೆಯಾಗಲಿದೆ. ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ ಕಡಿಮೆಯಾಗಿದೆ.
ರಾಜ್ಯದೆಲ್ಲೆಡೆ ಮಳೆ ಕ್ಷೀಣಿಸಿದ ಬೆನ್ನಲ್ಲೆ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಹರಿದು ಬರುತ್ತಿರುವ ನೀರಿ ಪ್ರಮಾಣವೂ ಇಳಿಮುಖವಾಗಿದ್ದರಿಂದ ಪ್ರವಾಹದ ಆತಂಕರದಲ್ಲಿರುವ ಉತ್ತರ ಕರ್ನಾಟಕದ ಜನ ನಿರಾಳರಾಗಿದ್ದಾರೆ.
Share your comments