ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 17 ರಿಂದ 20ರವರೆಗೆ ನಾಲ್ಕು ದಿನಗಳ ಕಾಲ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೆ. 17 ರಂದು ಮತ್ತು 18 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆ. 19 ಮತ್ತು 20 ರಂದು ಹೆಚ್ಚು ಮಳೆಯಾಗಲಿರುವುದರಿಂದ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ನೈಋತ್ಯ ಮುಂಗಾರು ಕರಾವಳಿ ಭಾಗದಲ್ಲಿ ತೀವ್ರಗೊಂಡಿದ್ದು, ಉತ್ತರ ಒಳನಾಡು ಪ್ರದೇಶದಲ್ಲಿ ಚುರುಕುಗೊಂಡಿದೆ.
ಗುರುವಾರ ಕರಾವಳಿಯ ದಕ್ಶಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶುಕ್ರವಾರದಿಂದ ಸತತ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ದೇಶದಲ್ಲಿ ಮೂರು ದಿನ ಭಾರಿ ಮಳೆ ಸಾಧ್ಯತೆ:
ಕರ್ನಾಟಕದ ಒಳನಾಡು ಹಾಗೂ ದಕ್ಷಿಣ ಒಳನಾಡುಗಳಲ್ಲಿ ವ್ಯಾಪಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತೆಲಂಗಾಣ, ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ಕೇರಳದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಉತ್ತರ ಒಳನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದ ಕರಾವಳಿ, ಮಹಾರಾಷ್ಟ್ರದ ಮಧ್ಯಭಾಗ, ಮರಾಠವಾಡ, ಕರಾವಳಿ, ಕೇರಳದಲ್ಲಿ ಬಿರುಸಿನಿಂದ ಕೂಡಿದ ಮಳೆಯಾಗಲಿದೆ. ಬಂಗಾಳಕೊಲ್ಲಿಯ ಈಶಾನ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಉಂಟಾಗಲಿದೆ.
Share your comments