ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.
ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಧಾರಾಕಾರ ಮಳೆಯಾಗಿರುವುದು ವರದಿ ಆಗಿದೆ.
ಇನ್ನು ಕುಮಟಾ, ಮಡಿಕೇರಿ, ಭಾಗಮಂಡಲ ವ್ಯಾಪ್ತಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಮಾಣಿ,
ಪಣಂಬೂರು, ಸುಬ್ರಹ್ಮಣ್ಯ, ಮೂಲ್ಕಿ, ಮಂಗಳೂರು, ಬೆಳ್ತಂಗಡಿ, ಕಾರ್ಕಳ, ಕುಂದಾಪುರ, ಕೋಟ, ಸಿದ್ದಾಪುರ, ಮಂಕಿ, ಅಂಕೋಲ, ಗೋರೆಸೊಪ್ಪದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ಇನ್ನು ರಾಜ್ಯದಲ್ಲಿ ಅತೀ ಗರಿಷ್ಠ ತಾಪಮಾನವು 39 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ಮುಂದಿನ 24 ಗಂಟೆಯ ಅವಧಿ: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಮಿಂಚುಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದ ಕರಾವಳಿ ಪ್ರದೇಶದಲ್ಲಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಉಳಿದಂತೆ ಮಲೆನಾಡಿನ ವಿವಿಧ ಭಾಗದಲ್ಲಿ ಅಲ್ಲಲ್ಲಿ ಮಳೆಯಾಗಿದೆ.
ದಕ್ಷಿಣ ಒಳನಾಡು: ಇನ್ನು ರಾಮನಗರ ಹಾಗೂ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ
ಮುಂದಿನ 24 ಗಂಟೆಯ ಅವಧಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡು: ಉತ್ತರ ಒಳನಾಡಿನ ವಿಜಯಪುರ, ಬೆಳಗಾವಿ, ಕೊಪ್ಪಳ ಹಾಗೂ ಬಾಗಲಕೋಟೆ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ
ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು: ರಾಜ್ಯದ ಮಲೆನಾಡಿನ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಸುತ್ತಮುತ್ತಲಿನ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ
ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಕರಾವಳಿ: ಇನ್ನು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುಡುಗು ಮುನ್ನೆಚ್ಚರಿಕೆ
ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚುಗುಡುಗು ಸಾಧ್ಯತೆ ಇದ್ದು, ಗಾಳಿಯ ವೇಗವು ಒಳನಾಡಿನಲ್ಲಿ
ಗಂಟೆಗೆ 40ರಿಂದ 50 ಕಿ.ಮೀ ತಲುಪುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಇನ್ನು ಮುಂದಿನ 48 ಗಂಟೆಯ ಅವಧಿಯಲ್ಲಿ ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚುಗುಡುಗು ಸಾಧ್ಯತೆ ಇದೆ.
ಗಾಳಿಯ ವೇಗವು ಒಳನಾಡಿನಲ್ಲಿ ಗಂಟೆಗೆ 40ರಿಂದ 50 ಕಿ.ಮೀ ಹಾಗೂ ಕರಾವಳಿಯಲ್ಲಿ ಗಂಟೆಗೆ 30ರಿಂದ 40 ಕಿ.ಮೀ ತಲುಪುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶದ ಮುನ್ಸೂಚನೆ
ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಯ ಅವಧಿಯಲ್ಲಿ ಕರ್ನಾಟಕದ ಕರಾವಳಿ ಬಿರುಗಾಳಿಯ ವೇಗವು
ಗಂಟೆಗೆ 40-45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ.
ಹೀಗಾಗಿ, ಈ ಸಂದರ್ಭದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಮುಂದಿನ 24 ಗಂಟೆಯ ಅವಧಿಯಲ್ಲಿ ಬೆಂಗಳೂರಿನಲ್ಲಿ ವಾತಾವರಣ
ಮುಂದಿನ 24 ಗಂಟೆಯ ಅವಧಿಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು,
ಸಂಜೆ ಅಥವಾ ರಾತ್ರಿ ವೇಳೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.
ಇನ್ನು ಗರಿಷ್ಠ ಉಷ್ಣಾಂಶವು 32 ಮತ್ತು ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಚಿತ್ರಕೃಪೆ: pexels
Share your comments