ಒಂದೆಡೆ ಕೊರೋನಾ, ಇನ್ನೊಂದು ಪ್ರವಾಹ, ಮತ್ತೊಂದೆಡೆ ಪ್ರಕೃತಿ ವಿಕೋಪ ಹೀಗೆ ನಾನಾ ರೀತಿಯಿಂದ ದೇಶದ ಜನತೆ ಸಂಕಷ್ಟದಲ್ಲಿ ಕಾಲ ಕಳೆಯುವಂತಾಗಿದೆ.
ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಸಿಡಿಲಿಗೆ ನೂರಾರು ಜನರು ಪ್ರಾಣ ಕಳೆದುಕೊಂಡಿರುವ ಘಟನೆ ನೆನಪು ಮಾಸುವ ಮುನ್ನವೆ ಈಗ ಅಸ್ಸಾಂನಲ್ಲಿ ಸುರಿದ ಭಾರೀ ಮಳೆಗೆ ಅಣೆಕಟ್ಟು ಹೊಡೆದು ಹಲವು ಗ್ರಾಮಗಳು ಮುಳುಗಡೆಯಾಗಿವೆ.
ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಬ್ರಹ್ಮಪುತ್ರ ನದಿ ನೀರಿನ ಮಟ್ಟದಲ್ಲಿ ಏರಿಕೆ ಉಂಟಾಗಿ ಅಸ್ಸಾಂನ ದುಬ್ರಿ ಜಿಲ್ಲೆಯ ಅಣೆಕಟ್ಟು ಒಡೆದು ಪ್ರವಾಹ ಉಂಟಾಗಿದೆ. ಇದರಿಂದಾಗಿ ಅಲ್ಲಿನ ಜನ ಜೀವನ ಅಸ್ತವ್ಯಸ್ತಗೊಂಡಿರುವುದಲ್ಲದೆ ಜನರು ಆತಂಕದಲ್ಲಿದ್ದಾರೆ. ಏಕಾಏಕಿ ಮನೆಗಳಿಗೆ ನೀರು ನುಗ್ದಿದ್ದರಿಂದ ಜನರು ಇಡೀ ರಾತ್ರಿ ಜಾಗರಣೆ ಮಾಡುವಂತಾಗಿದೆ.
ಕಳೆದ ಮೂರು ದಿನಗಳಿಂದ ಬ್ರಹ್ಮಪುತ್ರ ನದಿಪಾತ್ರದಲ್ಲಿ ಮಳೆಯಾಗುತ್ತಿದ್ದು, ನದಿ ಮಟ್ಟಕ್ಕಿಂತ ಹೆಚ್ಚಿನ ನೀರು ಹರಿಯುತ್ತಿದೆ. ಇದರಿಂದಾಗಿ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಜನ ಜಾನುವಾರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ನದಿಯಲ್ಲಿ ಹೆಚ್ಚಿನ ನೀರು ಹರಿದ ಪರಿಣಾಮ ಇಲ್ಲಿನ ಅಣೆಕಟ್ಟೆಯೊಂದು ಒಡೆದು, ಹಲವು ಗ್ರಾಮಗಳು ಮುಳುಗಡೆಯಾಗಿವೆ,
ಅಸ್ಸಾಂ ರಾಜ್ಯದ ದಿಬ್ರುಗರ್ ಪ್ರದೇಶದ ಮೋಹ್ನಾ ಗ್ರಾಮದಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದ್ದು ಹಲವು ಮನೆಗಳು ಮುಳುಗಡೆಯಾಗಿವೆ. ಜನರು ಮನೆ, ಆಹಾರ ಸಾಮಗ್ರಿಗಳಿಗಾಗಿ ಪರದಾಡುತ್ತಿದ್ದಾರೆ. ಬ್ರಹ್ಮಪುತ್ರ ನದಿಯಲ್ಲಿ ಅಪಾಯದ ಮಟ್ಟದಲ್ಲಿ ನೀರು ಹರಿಯುತ್ತಿದ್ದು ತೀವ್ರತೊಂದರೆಯುಂಟಾಗಿದೆ.
ಪಶ್ಚಿಮ ಬಂಗಾಳ, ಅರುಣಾಚಲಪ್ರದೇಶ, ಮೇಘಾಲಯ, ಸ್ಕಿಕ್ಕಿ, ಮಹಾರಾಷ್ಟ್ರ, ಕರ್ನಾಟಕ ರಾಜ್ಯಗಳಲ್ಲಿ ಶುಕ್ರವಾರ ಸುರಿದ ಮಳೆಯಿಂದಾಗಿ ಹಲವು ನದಿಗಳು ತುಂಬಿ ಹರಿಯುತ್ತಿವೆ.
Share your comments