ರಾಜ್ಯಾದ್ಯಂತ ಕಳೆದು 2 ವಾರಗಳಿಂದ ಭಾರೀ ಮಳೆಯಾಗುತ್ತಿದೆ. ಮುಂದಿನ ಕೆಲವು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 14ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಇನ್ನು ಈ ಮಧ್ಯೆ ಮುಂಜಾಗೃತ ಕ್ರಮವಾಗಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆದೇಶಿಸಿ ಶಿಕ್ಷಣ ಇಲಾಖೆ ಎಲ್ಲ ಶಾಲೆಯ ಮುಖ್ಯೋಪಾಧ್ಯಯರಿಗೆ ಸುತ್ತೋಲೆ ಹೊರಡಿಸಲಾಗಿದೆ.
ಸುತ್ತೋಲೆಯಲ್ಲಿ ಏನಿದೆ..?
- ರಾಜ್ಯಾದ್ಯಂತ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,ಹಳೆಯ ಹಾಗೂ ಶಿಥಿಲಾವಸ್ಥೆ ಅಲ್ಲಿರುವ ಕಟ್ಟಡ/ ಶೌಚಾಲಯಗಳನ್ನು ಮಕ್ಕಳಿಗೆ ಬಳಸದಂತೆ ಗಮನವಹಿಸಬೇಕು.
- ಮಳೆಯಿಂದ ಮಕ್ಕಳಿಗೆ ಶಾಲೆಗೆ ಬರಲು ಯಾವುದೇ ತೊಂದರೆ ಹಾಗೂ ಜೀವಹಾನಿ ಆಗದಂತೆ ನೋಡಿ ಕೊಳ್ಳಲು ಶಿಕ್ಷಣ ಇಲಾಖೆ ಆದೇಶ ನೀಡಿದೆ.
- ಮಕ್ಕಳಲ್ಲಿ ಕೆಮ್ಮು, ನೆಗಡಿ, ಜ್ವರ ಕೋವಿಡ್ ಅಂತಹ ಲಕ್ಷಣ ಕಂಡು ಬಂದ್ರೆ ತಕ್ಷಣ ಅಗತ್ಯ ಕ್ರಮ ತೆಗೆದುಕೊಳ್ಳಬೇಕು
- ಸ್ಥಳೀಯ ಪುರಸಭೆ/ಗ್ರಾಮ ಪಂಚಾಯಿತಿ ನೆರವಿನೊಂದಿಗೆ ಶಾಲಾ ತರಗತಿಯ ಸ್ವಚ್ಛಗೊಳಿಸಬೇಕು
- ಇನ್ನು ಬಿರುಕು ಬಿಟ್ಟಿರುವ ಹಾಗೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡದಿಂದ ಕೂಡಲೇ ಮಕ್ಕಳನ್ನು ಸ್ಥಳಾಂತರ ಮಾಡಬೇಕು
- ಕ್ಷೇತ್ರ ಶಿಕ್ಷಣಾಧಿಕಾರಿಗಳ ಪೂರ್ವ ಮೇರೆಗೆ ಶಾಲೆ ರಜೆ ಘೋಷಣೆ ಬಗ್ಗೆ ನಿರ್ಧಾರ ಮಾಡಬೇಕು
ಹವಾಮಾನ ಇಲಾಖೆಯಿಂದ ಅತಿ ಹೆಚ್ಚು ಮಳೆಯಾಗುವ ಸೂಚನೆ!
ಕಳೆದ ಕೆಲದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯ ನಡುವೆಯೇ ಭಾರತೀಯ ಹವಾಮಾನ ಇಲಾಖೆ ಇನ್ನೂ ಅತಿ ಹೆಚ್ಚು ಮಳೆಯಾಗುವ ಕುರಿತು ಸೂಚನೆ ನೀಡಿದೆ.ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡು ಭಾಗದಲ್ಲಿ ಪ್ರತ್ಯೇಕ ಭಾರಿ ಮಳೆಯಾಗುವ ಸಾಧ್ಯತೆಯಿದೆ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದಲ್ಲದೆ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.
ಅಲ್ಲದೆ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ಹಲವೆಡೆ ಭಾನುವಾರ ಧಾರಾಕಾರ ಮಳೆ ಮುಂದುವರಿದಿದ್ದು , ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಿಗೆ ಬುಧವಾರದವರೆಗೆ ರೆಡ್ ಅಲರ್ಟ್ ಘೋಷಿಸಿದೆ.
ಬರೋಬ್ಬರಿ 23 ಅಡಿ ಉದ್ದದ ಕಬ್ಬು ಬೆಳೆದ ರೈತ! ಅಚ್ಚರಿಯಾದರೂ ಇದು ಸತ್ಯ
Share your comments