ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೆ.1ರಿಂದ 4ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿಗೆ ಕೆಲವು ದಿನಗಳಿಂದ ವಿರಾಮಕೊಟಿದ್ದ ಮಳೆರಾಯ ಸೋಮವಾರ ರಾತ್ರಿ ಬೆಂಗಳೂರು ನಗರದ ಕೆಲವು ಬಡಾವಣೆಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಮನೆಗಳಿಗೆ ತೆರಳಬೇಕಾದವರು ಪರದಾಡುವಂತಾಗಿತ್ತು. ತಗ್ಗುಪ್ರದೇಶಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಮಾಡಿತು. ಆದರೆ ಮಳೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ನಗರದ ವಿವಿಧೆಡೆ ಐದಕ್ಕೂ ಹೆಚು ಮರಗಳು ಧರೆಗುರುಳಿದ್ದು,ಮರದ ರೆಂಬೆ ಕೊಂಬೆಗಳು ಧರೆಗುರುಳಿವೆ. ಒಂದು ಆಟೋ ಜಖಂಗೊಂಡಿದೆ.
ಮಳೆ-ಎಲ್ಲಿ,ಎಷ್ಟು? :
ಉತ್ತರ ಕನ್ನಡ ಜಿಲ್ಲೆಯ ಮಂಕಿ ಪ್ರದೇಶದಲ್ಲಿ 9 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಹೊಸಕೋಟೆ 7, ಶಿರಾ 6, ಕಾರವಾರ, ಶ್ರೀನಿವಾಸಪುರ, ಬಂಗಾರಪೇಟೆ, ಚಿಂತಾಮಣಿ, ಕುಣಿಗಲ್ 4, ಶಿಡ್ಲಘಟ್ಟ, ಚಿಕ್ಕಬಳ್ಳಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.
Share your comments