Weather Update ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ (Heavy Rain)ಮಳೆಯಾಗಿದೆ.
ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 36.5 ಡಿಗ್ರಿ ಸೆಲ್ಸಿಯಸ್ ಕಾರವಾರ ಮತ್ತು ವಿಜಯಪುರದಲ್ಲಿ ದಾಖಲಾಗಿದೆ.
ಮುಂದಿನ 24 ಗಂಟೆಗಳಲ್ಲಿ: ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆ, ಗುಡುಗು (Heavy Rain) ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ಎಲ್ಲ ಜಿಲ್ಲೆಗಳ ಮತ್ತು ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು: Weather Update ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆ, (Heavy Rain) ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ಎಲ್ಲ ಜಿಲ್ಲೆಗಳ ಮತ್ತು ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ: ದಕ್ಷಿಣ ಒಳನಾಡಿನ ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ,ತುಮಕೂರು,
ರಾಮನಗರ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. (Weather Update)
ಗುಡುಗು ಮುನ್ನೆಚ್ಚರಿಕೆ
ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ತಾಪಾಮಾನದ ಮುನ್ನೆಚ್ಚರಿಕೆ ಇಲ್ಲ
ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆ ಇಲ್ಲ.
ಉಳಿದಂತೆ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಕಂಡುಬಂದಿಲ್ಲ.
ಮುಂದಿನ 24 ಗಂಟೆಗಳಲ್ಲಿ: ಬೆಂಗಳೂರು ನಗರದಲ್ಲಿ (Bangalore Heavy Rain) ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು,
ಸಂಜೆ ಮತ್ತು ರಾತ್ರಿ ಸಮಯದಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ (Bangalore Heavy Rain) ಮಳೆ ಆಗುವ ಸಾಧ್ಯತೆ ಇದೆ.
ಇನ್ನು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಭಾರೀ ಮಳೆ: ಕಳೆದ 24 ಗಂಟೆಗಳಲ್ಲಿ ತುಮಕೂರಿನಲ್ಲಿ 11 ಸೆಂ.ಮೀ, ಪಾವಗಡದಲ್ಲಿ 9 ಸೆಂ.ಮೀ ಹಾಗೂ ಚನ್ನಪಟ್ಟದಲ್ಲಿ 7 ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.
ಇನ್ನು ಉಳಿದಂತೆ ರಾಮನಗರ, ಹರದನಹಳ್ಳಿ ಕೆವಿಕೆ (ಚಾಮರಾಜನಗರ ಜಿಲ್ಲೆ) ಭಾಗದಲ್ಲಿ ತಲಾ 5 ಸೆಂ.ಮೀ ಮಳೆ ಆಗಿರುವುದು ವರದಿ ಆಗಿದೆ.
ನಾಲ್ವತವಾಡ, ಕುಣಿಗಲ್, ಯಡ್ರಾಮಿ, ಚಿತ್ತಾಪುರ, ಜೀವರ್ಗಿ, ಕೋಡ್ಲಾ, ಫರಹತಾಬಾದ್, ಗುಂಡಗರ್ತಿ, ಕಕ್ಕೇರಿ, ಪರಶುರಾಂಪುರ, ಮದ್ದೂರು,
ಮಳವಳ್ಳಿ, ಚಾಮರಾಜನಗರ, ಗುಬ್ಬಿ, ಬುಕ್ಕಪಟ್ಟಣ, ಬಂಡೀಪುರ, ದೊಡ್ಡಬಳ್ಳಾಪುರದಲ್ಲಿ ತಲಾ 3 ಸೆಂ.ಮೀ ಮಳೆ ಆಗಿದೆ. ಅಡಕಿ, ಅರಕಲಗೂಡು,
ಚನ್ನರಾಯಪಟ್ಟಣ,ಕೊಣನೂರು, ಹೆಬ್ಬೂರು, ಮೈಸೂರಿನಲ್ಲಿ ತಲಾ 2 ಸೆಂ.ಮೀ ಮಳೆ ಆಗಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
(Pic Credits: pexels)
Share your comments