ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನು ಓದಿರಿ: ಜಾಗತಿಕ ಹಸಿವಿನ ಸೂಚ್ಯಾಂಕದಲ್ಲಿ ಭಾರತಕ್ಕೆ 107ನೇ ಸ್ಥಾನ !
ಅಕ್ಟೋಬರ್ 16ರಂದು ರಾಜ್ಯದ ದಕ್ಷಿಣ ಒಳನಾಡಿ ಜಿಲ್ಲೆಗಳಾದ ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹಾಗೂ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.
ಅದೇ ರೀತಿ ಅಕ್ಟೋಬರ್ 17ಕ್ಕೆ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಇದನ್ನೂ ಓದಿರಿ: ಡ್ರೋನ್ ಖರೀದಿಸಲು ಯೋಜಿಸುತ್ತಿರುವ ರೈತರಿಗೆ ಸುವರ್ಣಾವಕಾಶ, ಸರ್ಕಾರ 50% ಸಬ್ಸಿಡಿ
ನೈರುತ್ಯ ಮನ್ಸೂನ್ ಕರ್ನಾಟಕದ ದಕ್ಷಿಣ ಒಳಭಾಗದಲ್ಲಿ ಪ್ರಬಲವಾಗಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಕ್ರಿಯವಾಗಿದೆ.
ಆದರೆ, ಕರಾವಳಿಯ ಜಿಲ್ಲೆಗಳಲ್ಲಿ ದುರ್ಬಲವಾಗಿದೆ. ಹೀಗಾಗಿ, ಕರ್ನಾಟಕದ ದಕ್ಷಿಣ ಒಳಭಾಗದಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾಗಿರುವುದು ವರದಿ ಆಗಿದೆ.
ಇದನ್ನೂ ಓದಿರಿ: ಕಬ್ಬಿನ ದರ ನಿಗದಿಗೆ ಸಿ.ಎಂ ನೇತೃತ್ವದಲ್ಲಿ ಸಭೆ: ಶಂಕರ ಪಾಟೀಲ ಮುನೇನಕೊಪ್ಪ
ಕಳೆದ 24 ಗಂಟೆಗಳಲ್ಲಿ ರಾಜ್ಯದ ಟಿ. ನರಸೀಪುರ (ಮೈಸೂರು), ಕೊಳ್ಳೇಗಾಲ (ಚಾಮರಾಜನಗರ) ಸಸದದಲ್ಲಿ ತಲಾ 9 ಸೆಂ.ಮೀ ಮಳೆ ಆಗಿದೆ.
ಮಂಠಾಳ (ಬೀದರ್), ಯಡ್ರಾಮಿ (ಕಲಬುರ್ಗಿ), ಕನಕಪುರ (ರಾಮನಗರ), ಮಾಲೂರು (ಕೋಲಾರ) ವ್ಯಾಪ್ತಿಯಲ್ಲಿ ತಲಾ 8 ಸೆಂ.ಮೀ, ಪಾಂಡವಪುರ (ಮಂಡ್ಯ), ಹಗರಿಬೊಮ್ಮನಹಳ್ಳಿ (ಬಳ್ಳಾರಿ)ಯಲ್ಲಿ ತಲಾ 7ಸೆಂ.ಮೀ ಮಳೆ ಆಗಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.
ATM ನಿರಾಕರಿಸಿದ 500 ರೂ.ಗಳನ್ನು ನೀಡದ ಬ್ಯಾಂಕಿಗೆ ದಂಡ! ಖರ್ಚು, ಬಡ್ಡಿ ಸೇರಿ ಗ್ರಾಹಕನಿಗೆ ₹1,02,700 ಪರಿಹಾರ!
ಮುಂದಿನ 24 ಗಂಟೆಗಳ ಕಾಲ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ.
ರಾಜ್ಯದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
Share your comments