ರಾಜ್ಯದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಯಾದಗಿರಿ, ಕಲಬುರಗಿ, ಬೀದರ್, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 13 ರಂದು ಭಾರಿ ಮಳೆ (Heavy rain) ಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲೆ ಯೆಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆ. 13 ಮತ್ತು 14 ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಜಿಲ್ಲೆಗಳಲ್ಲಿ 64.5 ಸೆಂ.ಮೀನಿಂದ 115.5 ಸೆಂ.ಮೀ ಮಳೆಯಾಗುವ ಸಾಧತೆಯಿದೆ.
ನೈರುತ್ಯ ಮುಂಗಾರು ಬಿರುಸುಗೊಂಡಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯಲ್ಲಿ 3.2 ಮೀಟರಗಳಷ್ಟು ಎತ್ತರದ ಅಲೆಗಳು ಏಳುವ ಸಾಧ್ಯತೆಯಿರುವುದರಿಂದ ಮೀನುಗಾರರು (Fishers) ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ತಗ್ಗಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು.
Share your comments