ರಾಜ್ಯದ ಕರಾವಳಿ ಭಾಗದಲ್ಲಿ ಧಾರಾಕಾರ (Heavy Rain) ಮಳೆ ಆಗುತ್ತಿದ್ದು, ಪ್ರವಾಹದ ಭೀತಿ ಶುರುವಾಗಿದೆ.
ರಾಜ್ಯದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇನ್ನು ಎರಡು ದಿನ ಭಾರೀ ಮಳೆಯಾಗಲಿದ್ದು, ಸರ್ಕಾರವೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಇನ್ನು ಮುಂದಿನ ಎರಡು ದಿನ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಭಾರೀಯಿಂದ ಭಾರೀ ಮಳೆಯಾಗಲಿದೆ
ಎಂದು ಭಾರತೀಯ ಹವಾಮಾನ (imd report today) ಇಲಾಖೆ ಎಚ್ಚರಿಕೆ ನೀಡಿದೆ.
ಅಲ್ಲದೇ ಇದೇ ಸಂದರ್ಭದಲ್ಲಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀಯಿಂದ
ಅತೀ ಭಾರೀ ಮಳೆಯಾಗಲಿದೆ ಎಂದು (Imd Report Today) ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಅಲ್ಲದೇ ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ಒಳನಾಡಿನ ಹಾಸನ ಜಿಲ್ಲೆಗಳ ಒಂದೆರಡು
ಕಡೆಗಳಲ್ಲಿ ಜೋರಾದ ಮಳೆಯಾಗಲಿದೆ (imd report) ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ರಾಜ್ಯದ ಹಲವು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಎಂಟು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.
ಮಳೆ ಅವಘಡದಿಂದ ರಾಜ್ಯದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಮೃತಪಟ್ಟಿರುವುದು ವರದಿ ಆಗಿದೆ.
Flood Fear ಭಾರೀ ಮಳೆ; ರಾಜ್ಯದ ಈ ಭಾಗದಲ್ಲಿ ಪ್ರವಾಹ ಭೀತಿ!
ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು,
ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರದಲ್ಲಿ, ಮುಂದಿನ 48 ಗಂಟೆಗಳ ಕಾಲ, ಹವಾಮಾನ ಇಲಾಖೆಯು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವನ್ನು ಮುನ್ಸೂಚಿಸುತ್ತದೆ,
ಲಘು ಮಳೆಯಾಗುವ ಸಾಧ್ಯತೆಯಿದೆ ಮತ್ತು ಮೇಲ್ಮೈ ಗಾಳಿಯು ಬಲವಾಗಿ ಮತ್ತು ಜೋರಾಗಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಕಳೆದ 24 ಗಂಟೆಯ ಅವಧಿಯಲ್ಲಿ ನೈರುತ್ಯ ಮುಂಗಾರು ರಾಜ್ಯದಾದ್ಯಂತ ಚುರುಕಾಗಿತ್ತು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿರುವುದು ವರದಿ ಆಗಿದೆ.
ಅತೀ ಭಾರೀ ಮಳೆ: ಭಾನುವಾರ ಹಾಗೂ ಸೋಮವಾರ ರಾಜ್ಯದ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಭಾಗಮಂಡಲದಲ್ಲಿ ತಲಾ 20 ಸೆಂ.ಮೀ ಮಳೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್‌ನಲ್ಲಿ 19 ಸೆಂ.ಮೀ ಮಳೆಯಾಗಿದೆ.
ಗೇರುಸೊಪ್ಪದಲ್ಲಿ 18 ಸೆಂ.ಮೀ, ಯಲ್ಲಾಪುರ, ಸುಬ್ರಹ್ಮಣ್ಯದಲ್ಲಿ ತಲಾ 17 ಸೆಂ.ಮೀ ಮಳೆಯಾಗಿದೆ.
ಮಾಣಿ, ಕೊಟ್ಟಿಗೆಹಾರದಲ್ಲಿ ತಲಾ 16 ಸೆಂ.ಮೀ, ನಾಪ್ಲೋಕ್ಲುದಲ್ಲಿ ತಲಾ 15 ಸೆಂ.ಮೀ, ಕದ್ರಾ, ಕುಮಟಾ, ಮಂಕಿ, ಹುಂಚದಕಟ್ಟೆ,
ಮೂರ್ನಾಡು ಸೇರಿದಂತೆ ಹಲವು ಭಾಗದಲ್ಲಿ ಭಾರೀ ಮಳೆಯಾಗಿರುವುದು ವರದಿ ಆಗಿದೆ.
ಮುಂದಿನ 48 ಗಂಟೆಯಲ್ಲಿ ಭಾರೀ ಮಳೆ: ಮುಂದಿನ 48 ಗಂಟೆಯ ಅವಧಿಯಲ್ಲಿ
ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.
ಕರಾವಳಿಯ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀಯಿಂದ ಅತೀ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಸಂದರ್ಭದಲ್ಲಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ
ಭಾರೀಯಿಂದ ಅತೀ ಭಾರೀ ಮಳೆಯಾಗಲಿದೆ ಎಂದು (Imd Report Today) ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಅಲ್ಲದೇ ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು,
ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಜೋರಾದ ಮಳೆಯಾಗಲಿದೆ (imd report) ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಗುಡುಗು ಮುನ್ನೆಚ್ಚರಿಕೆ: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚುಗುಡುಗು ಸಾಧ್ಯತೆ ಇದ್ದು,
ಬಿರುಗಾಳಿಯ ವೇಗವು ಗಂಟೆಗೆ 40ರಿಂದ 50 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣ ಇರಲಿದೆ.
ಮೀನುಗಾರರಿಗೆ ಎಚ್ಚರಿಕೆ: ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40ರಿಂದ 45 ಕಿ.ಮೀನಿಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ.
ಹೀಗಾಗಿ, ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
Image Credit: Pexels
Share your comments