1. ಸುದ್ದಿಗಳು

ಮನ್‌ ಕಿ ಬಾತ್‌ಗೆ ನೂರರ ಸಂಭ್ರಮ: ಪ್ರಶ್ನೆಗಳ ಸುರಿಮಳೆ ಸುರಿಸಿದ ಸಿದ್ದರಾಮಯ್ಯ!

Hitesh
Hitesh
Hundreds celebrate Mann Ki Baat: Siddaramaiah is showered with questions!

ಪ್ರಧಾನಿ ನರೇಂದ್ರ ಮೋದಿ ಅವರ ಮನ್‌ ಕಿ ಬಾತ್‌ ನೂರು ಸರಣಿಗಳನ್ನು ತಲುಪಿದೆ. ಈ ಸಂದರ್ಭದಲ್ಲಿಯೇ ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು

ಸಾಮಾಜಿಕ ಜಾಲತಾಣದಲ್ಲಿ ಕೆಲವು ಪ್ರಶ್ನೆಗಳನ್ನು ಮಾಡಿದ್ದಾರೆ.

ಅವರ ಸಮಾಜಿಕ ಜಾಲತಾಣದಲ್ಲಿ ಈ ಕುರಿತು ಬರೆದುಕೊಂಡಿರು ಅವರು, ಮಾನ್ಯ ನರೇಂದ್ರ ಮೋದಿ ಅವರೇ ನೀವು ನೂರು ‘‘ಮನ್ ಕಿ ಬಾತ್” ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು.

ಈಗಲಾದರೂ ‘‘ಜನ್ ಕಿ ಬಾತ್” ಕೇಳುತ್ತಿರಾ?” ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಲದೇ “ಅಂತಾರಾಷ್ಟ್ರೀಯ  ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 125 ಡಾಲರ್ ಇದ್ದಾಗ ದೇಶದಲ್ಲಿ ಪೆಟ್ರೋಲ್ ಬೆಲೆ ರೂ. 57 ಇತ್ತು,

ಈಗ ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 54.77 ಡಾಲರ್ ಇರುವಾಗ ಪೆಟ್ರೋಲ್ ಬೆಲೆ ರೂ. 102 ರೂಪಾಯಿ ಆಗಿರುವುದು ಯಾಕೆ?

ನಾ ಖಾವುಂಗಾ ನಾ ಖಾನೆ ದೂಂಗಾ ಎಂದು ನೀವು ಹೇಳಿದರೂ, ನಿಮ್ಮ ಪಕ್ಷದ ಸಚಿವರೇ ಕಮಿಷನ್ ಹಣ ತಿಂದು ಜೈಲಿಗೆ ಹೋಗುತ್ತಿರುವುದೇಕೆ?

ರಾಜ್ಯದ ಸಚಿವರು ಸರ್ಕಾರಿ ಗುತ್ತಿಗೆಗಳಲ್ಲಿ 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ

ನಿಮಗೆ ಪತ್ರ ಬರೆದಿದ್ದರೂ ಅದಕ್ಕೆ ಉತ್ತರಿಸುವ ಧೈರ್ಯ ತೋರಿಲ್ಲ ಯಾಕೆ?

ರಾಷ್ಟ್ರೀಕೃತ ಬ್ಯಾಂಕುಗಳು ಸೇರಿದಂತೆ ಒಂದು ಲಕ್ಷದ ವರೆಗಿನ ರೈತರ ಸಾಲವನ್ನು ಅಧಿಕಾರಕ್ಕೆ ಬಂದ ಮೊದಲ

ಸಚಿವ ಸಂಪುಟದಲ್ಲಿಯೇ ಮನ್ನಾ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದರೂ ಮನ್ನಾ ಮಾಡದೆ ಇರುವುದು ಯಾಕೆ?

ರೈತರ ಸಾಲ ಮನ್ನಾ ಮಾಡಲು ನಿರಾಕರಿಸುತ್ತಿರುವ ನಿಮ್ಮ ಸರ್ಕಾರ  ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿರುವುದೇಕೆ?

ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ತೆರಿಗೆ ಮತ್ತು ಸುಂಕಗಳ ರೂಪದಲ್ಲಿ 4 ಲಕ್ಷದ 75 ಸಾವಿರ ಕೋಟಿ ರೂಪಾಯಿ ನೀಡಿದರೂ ಕೇಂದ್ರ ಸರ್ಕಾರದ

ತೆರಿಗೆ ಹಂಚಿಕೆ ರೂಪದಲ್ಲಿ  ರೂ.50,257 ಕೋಟಿ ಮಾತ್ರ ಕರ್ನಾಟಕ ರಾಜ್ಯಕ್ಕೆ ನೀಡುತ್ತಿರುವುದು ಯಾಕೆ?

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಗಬೇಕಾಗಿರುವ ತೆರಿಗೆ ಹಂಚಿಕೆಯ ಪಾಲು ಶೇಕಡಾ 4.72ರಿಂದ ಶೇಕಡಾ 3.64ಕ್ಕೆ ಇಳಿದದ್ದು ಯಾಕೆ?

ಕೇಂದ್ರ ಹಣಕಾಸು ಆಯೋಗ ಕರ್ನಾಟಕಕ್ಕೆ ಪರಿಹಾರ ರೂಪದಲ್ಲಿ  ರೂ.5,495 ಕೋಟಿ ವಿಶೇಷ ಅನುದಾನ ನೀಡಬೇಕೆಂದು ಶಿಫಾರಸು ಮಾಡಿದ್ದರೂ

ಕೇಂದ್ರ ಹಣಕಾಸು ಸಚಿವರು ನಿರಾಕರಿಸಿದ್ದು ಯಾಕೆ?  2013ರಲ್ಲಿ ಕೇಂದ್ರ ಅನುದಾನಿತ ಯೋಜನೆಗಳಲ್ಲಿ ಶೇಕಡಾ 25ರಷ್ಟು ಮಾತ್ರ

ಇದ್ದ ರಾಜ್ಯದ ಪಾಲು 2021-22ರಲ್ಲಿ ಶೇಕಡಾ 55ಕ್ಕೆ ಹೆಚ್ಚಿದ್ದು ಯಾಕೆ?

ಮಳೆ ಹಾನಿಗಾಗಿ ರಾಜ್ಯ ಸರ್ಕಾರ ರೂ.35,000 ಕೋಟಿ ಪರಿಹಾರ ಕೇಳಿದ್ದರೂ ಡಬಲ್ ಎಂಜಿನ್ ಸರ್ಕಾರ ಕೇವಲ ರೂ.1,895 ಕೋಟಿ ನೀಡಿದ್ದು ಯಾಕೆ?

ರೈತರ ಬೆಳೆಗಳ ಬೆಲೆ ಕುಸಿತ ತಡೆಯಲು ಬೆಂಬಲ ಬೆಲೆಯ ಮೂಲಕ ಮಾರುಕಟ್ಟೆ ಮಧ್ಯಪ್ರವೇಶಕ್ಕೆ ನೀಡಲಾಗುತ್ತಿದ್ದ

ಅನುದಾನವನ್ನು ರೂ.1,500 ಕೋಟಿ ಗಳಿಂದ ಒಂದು ಲಕ್ಷ ರೂಪಾಯಿಗಳಿಗೆ ಇಳಿಸಿದ್ದು ಯಾಕೆ? 

ಪಿಎಸ್ ಐ ನೇಮಕದಲ್ಲಿ ಅಂದಾಜು ರೂ.300 ಕೋಟಿಗೂ ಮೀರಿ ಲಂಚದ ಅವ್ಯವಹಾರ ನಡೆದು ಉದ್ಯೋಗದ

ಅವಕಾಶ ಕಳೆದುಕೊಂಡಿರುವ ಸುಮಾರು 54 ಸಾವಿರ ಯುವಜನರ ಮನದ ಮಾತಿಗೆ ನೀವು ಪ್ರತಿಕ್ರಿಯಿಸದೆ ಮೌನವಾಗಿರುವುದು ಯಾಕೆ? 

ಪ್ರಧಾನಿ ಅವರೇ ನೀವು ರೋಡ್ ಶೋ ನಡೆಸಿರುವ ಬೆಂಗಳೂರು ರಸ್ತೆಗಳಲ್ಲಿರುವ 25,000 ಗುಂಡಿಗಳನ್ನು ಮುಚ್ಚಲು 

ರೂ.7200 ಕೋಟಿ, ಅಂದರೆ ಒಂದು ಗುಂಡಿಗೆ ತಲಾ ರೂ.9.20 ಲಕ್ಷ ಖರ್ಚು ಮಾಡಿದರೂ ಗುಂಡಿಗಳು ಉಳಿದುಕೊಂಡಿರುವುದು ಯಾಕೆ? 

ಗ್ರಾಮೀಣ ಭಾಗಗಳಲ್ಲಿ ಉದ್ಯೋಗ ಸಂಜೀವಿನಿಯಾಗಿರುವ ಯುಪಿಎ ಸರ್ಕಾರದ ಹೆಮ್ಮೆಯ ಕಾರ್ಯಕ್ರಮವಾಗಿರುವ ನರೇಗಾ

ಯೋಜನೆಗೆ ಈ ಸಾಲಿನ ಬಜೆಟ್ ನಲ್ಲಿ ಶೇಕಡಾ 21.66ರಷ್ಟು ಅಂದರೆ ರೂ.60,000 ಕೋಟಿಯಷ್ಟು

ಅನುದಾನವನ್ನು ಡಬಲ್ ಎಂಜಿನ್ ಸರ್ಕಾರ ಕಡಿತಗೊಳಿಸಿದ್ದು ಯಾಕೆ? 

ನಮ್ಮ ಸರ್ಕಾರದ ಐದು ವರ್ಷಗಳ ಆಡಳಿತದಲ್ಲಿ ಮಾಡಿದ್ದ ಒಟ್ಟು ಸಾಲ ರೂ.1,16,512 ಕೋಟಿ,

ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಒಟ್ಟು ಸಾಲ ರೂ.3,22,000 ಕೋಟಿ.

ಡಬಲ್ ಎಂಜಿನ್ ಸರ್ಕಾರ ಕರ್ನಾಟಕ ರಾಜ್ಯವನ್ನು ಸಾಲಗಾರ ರಾಜ್ಯ ಮಾಡಿದ್ದು ಯಾಕೆ?”

ಎಂಬ ವಿವರ ಇರುವ ಸುದೀರ್ಘ ಬರಹವನ್ನು ಅವರ ಅಧಿಕೃತ ಫೇಸ್‌ ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಚಿತ್ರಕೃಪೆ: ಸಿದ್ದರಾಮಯ್ಯ ಅವರ ಫೇಸ್‌ಬುಕ್‌ ಖಾತೆ

Published On: 02 May 2023, 03:01 PM English Summary: Hundreds celebrate Mann Ki Baat: Siddaramaiah is showered with questions!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.