ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಅ.10ರಿಂದ 13ರವರೆಗೆ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ' ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾನುವಾರ ಮತ್ತು ಸೋಮವಾರ ಕರ್ನಾಟಕ ಸೇರಿದಂತೆ ತೆಲಂಗಾಣ ಮತ್ತು ಪೂರ್ವ ಕರಾವಳಿ ತೀರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉದ್ಭವಿಸಲಿರುವ ಸೈಕ್ಲೋನ್ ಪೂರ್ವ ಕರಾವಳಿಯತ್ತ ಅಪ್ಪಳಿಸಲಿದೆ.
‘ತುಮಕೂರು, ಕೋಲಾರ, ಚಿತ್ರ ದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ’ ಎಂದರು.
ಅಂಡಮಾನ ದ್ವೀಪದಲ್ಲಿ ಶುಕ್ರವಾರದಿಂದಲೇ ಧಾರಾಕಾರ ಮಳೆ ಸುರಿಯುತ್ತಿದ್ದು, ಶನಿವಾರ ಸಹ 6.5-12 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ. ಬಂಗೊಳಕೊಲ್ಲಿಯಲ್ಲಿ ಮೀನುಗಾರರು ತೆರಳಿದವರು ಕೂಡಲೇ ತೀರಕ್ಕೆ ಮರಳಬೇಕೆಂದು ಇಲಾಖೆ ಸೂಚಿಸಿದೆ.
ಚಿಂಚೋಳಿಯಲ್ಲಿ ಧಾರಾಕಾರ ಮಳೆ:
ಕಲಬುರಗಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆ ಮತ್ತೆ ಶುಕ್ರವಾರ ಇಡೀ ದಿನ ಮೋಡ ಕವಿದ ವಾತಾವರಣವಿತ್ತು. ಸಾಯಂಕಾಲ ಮಳೆಯ ಸಿಂಚನವೂ ಆಯಿತು.
ಚಿಂಚೋಳಿ ತಾಲಾಕಿನ ಚಿಂಚೋಳಿ ಪಟ್ಟಣ, ಸುಲೇಪೇಟ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಉತ್ತಮ ಮಳೆಯಾಯಿತು. ಹೊಲಗಲು ಜಲಾವೃತಗೊಂಡರೆ ಹಳ್ಳಗಳು ತುಂಬಿ ಹರಿದವು. ಮುಂದೆ ಮಳೆಯಾದರೆ ಜೋಳದ ಬಿತ್ತನೆಗೆ ತೊಂದರೆಯಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲೆಯ ಸಿದ್ದಾಪುರದಲ್ಲಿ ಧಾರಾಕಾರ ಮಳೆ:
ನೆಲ್ಯಹುದಿಕೇರಿ, ಸಿದ್ದಾಪುರ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಶುಕ್ರವಾರ ಭಾರಿ ಮಳೆಯಾಗಿದೆ. ಶುಕ್ರವಾರ ಬೆಳಗ್ಗಿನಿಂದ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ನಂತರ ಆರಂಭವಾದ ಮಳೆಯು ಒಂದು ಗಂಟೆ ಆರ್ಭಟಿಸಿತು.
Share your comments