ಕರ್ನಾಟಕ ಪರೀಕ್ಷಾ ಪ್ರಾಧಿಕಾರ (karnataka pariksha pradhikara ಕೆಐಎ)ವು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
RH 1424 ಮತ್ತು RH 1706 ತಳಿಯ ಸಾಸಿವೆ ಬೆಳೆಯಿಂದ ರೈತರಿಗೆ ಬಂಪರ್ ಆದಾಯ!
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬೆಂಗಳೂರಿನ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆ ಭರ್ತಿ ಮಾಡಲಾಗುತ್ತಿದೆ.
ಆಸಕ್ತ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ರಾಜ್ಯದ ರೈತರಿಗೆ ಸಿಹಿಸುದ್ದಿ: ಪ್ರಮುಖ ಜಲಾಶಯಗಳು ಭರ್ತಿ!
ಯಾವೆಲ್ಲ ಹುದ್ದೆಗಳಿಗೆ ಅರ್ಜಿ ಆಹ್ವಾನ
ಟೆಕ್ನಿಕಲ್ ಹೆಡ್ ಕಂಪ್ಯೂಟರ್ ಸೆಕ್ಷನ್ 1, ಸೀನಿಯರ್ ಪ್ರೋಗ್ರಾಮರ್ 3, ಪ್ರೋಗ್ರಾಮರ್ 8, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ 2, ಡೇಟಾ ಅನಲಿಸ್ಟ್ 4, ಟ್ರೈನಿ/ ಅಪ್ರೆಂಟಿಸ್ 3 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹಿಂದಿನ ಪ್ರಕಟಣೆಗಳ ಅನುಸಾರ ಇ-ಮೇಲ್ ಅಥವಾ ಖುದ್ದಾಗಿ ಈಗಾಗಲೇ ಸ್ವವಿವರಗಳನ್ನು ನೀವು ಕಳುಹಿಸಿದ್ದರೆ, ಈ ಬಾರಿ ಅರ್ಜಿ ಸಲ್ಲಿಸುವ ಅವಕಾಶ ಇರುವುದಿಲ್ಲ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ keaopportunities@gmail.com.
ಇದನ್ನೂ ಓದಿರಿ: ಬೆಂಗಳೂರು ಬಸವನಗುಡಿ ಕಡಲೆ ಪರಿಷೆ: ಈ ಬಾರಿ ತೆಪ್ಪೋತ್ಸವದ ಮೆರುಗು!
ಪೊಲೀಸ್ ಕಾನ್ಸಟೇಬಲ್ ಹುದ್ದೆ: ವಯೋಮಿತಿ ಹೆಚ್ಚಳ
ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ, ರಾಜ್ಯ ಸರ್ಕಾರವು ಆದೇಶ ಮಾಡಿದೆ.
ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಿಸುವಂತೆ ಆಕಾಂಕ್ಷಿಗಳು ಸರ್ಕಾರವನ್ನು ಒತ್ತಾಯಿಸುತ್ತಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ್ದ ಸಚಿವ ಆರಗ ಜ್ಞಾನೇಂದ್ರ ಅವರು ಚರ್ಚೆ ಮಾಡುವುದಾಗಿ ತಿಳಿಸಿದ್ದರು, ಇದೀಗ 2 ವರ್ಷ ವಯೋಮಿತಿಯನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಕೊರೊನಾ ಸೋಂಕು ಭೀತಿಯಿಂದಾಗಿ ನಿಯಮಿತವಾಗಿ ನೇಮಕಾತಿ ನಡೆಯದ ಪ್ರಯುಕ್ತ ಆಕಾಂಕ್ಷಿತ ಅಭ್ಯರ್ಥಿಗಳು
ಅರ್ಜಿ ಸಲ್ಲಿಸಲು ಅವಕಾಶ ವಂಚಿತವಾಗಿರುವುದರಿಂದ ವಯೋಮಿತಿಯಲ್ಲಿ ಕನಿಷ್ಠ ಎರಡು ವರ್ಷಗಳ ವಿನಾಯಿತಿ ನೀಡುವಂತೆ ಹಲವಾರು ಮನವಿಗಳು ಬಂದಿದೆ.
ಕೋವಿಡ್ 19 ಸಂದರ್ಭದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ವಂಚಿತರಾಗಿರುವ ಹಿನ್ನಲೆ 2022-23 ನೇ ಸಾಲಿನಲ್ಲಿ ಕರೆದಿರುವ ಪೊಲೀಸ್ ಕಾನ್ಸ್‌ಟೇಬಲ್
ಹುದ್ದೆಗಳಿಗೆ ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ. ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವುದಾಗಿ ಅವರು ತಿಳಿಸಿದ್ದಾರೆ.
Share your comments