ಇನ್ನೂ 2 ದಿನಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಮಳೆ (Monsoon) ಪ್ರವೇಶವಾಗಲಿದ್ದು, ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 2ರಿಂದ ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿರುವ ಹಿನ್ನಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿರಿ: Asani Cyclone ನ ಕಾರಣ ಕರ್ನಾಟದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ!
PM Kisan 11 ನೇ ಕಂತಿನ ಹಣ ನಿಮ್ಮ ಖಾತೆಗೆ ಇನ್ನೂ ಬಂದಿಲ್ಲವೇ? ಹಾಗಿದ್ದರೆ ಈಗಲೇ ಚೆಕ್ ಮಾಡಿ...
ಜೂನ್ 2ರೊಳಗೆ ಕರ್ನಾಟಕದ ಕೆಲವು ಭಾಗಗಳಿಗೆ ನೈಋತ್ಯ ಮಾನ್ಸೂನ್ ಅಪ್ಪಳಿಸಲು ಸಿದ್ಧವಾಗಿದೆ. ಹವಾಮಾನ ಇಲಾಖೆ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಇನ್ನೆರಡು ದಿನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೂ ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲಿ 7 ಮಿಮೀವರೆಗಿನ ಮಳೆ ಬೀಳಬಹುದು ಎಂದೂ ತಿಳಿಸಿದೆ.
ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ (Yellow Alert) ನೀಡಲಾಗಿದೆ. ಜೂನ್ 2ರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನಲ್ಲಿ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
PM Sinchayi: ರೈತರಿಗೆ ಇಲ್ಲಿದೆ ಭರ್ಜರಿ ಸಬ್ಸಿಡಿ: ನೀರಾವರಿ ಯೋಜನೆಗೆ ಶೇ.90ರಷ್ಟು ಸಹಾಯಧನ
ಕಪ್ಪು ಗೋಧಿಯ ಬಗ್ಗೆ ನಿಮಗೆ ಗೊತ್ತೆ? ಇಲ್ಲಿದೆ ರೈತರಿಗೆ ಲಾಭದಾಯಕ ಕೃಷಿಯ ಐಡಿಯಾ!
ಇಂದಿನಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಲಿದೆ ಜೂನ್ 2ರ ರಾತ್ರಿ ಅಥವಾ ಜೂನ್ 3ಕ್ಕೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉತ್ತರ ಕನ್ನಡ, ಉಡುಪಿ, ಮಲೆನಾಡು, ಬೆಂಗಳೂರು, ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಯಲ್ಲಿ ಮುಂಗಾರು ಪ್ರವೇಶವಾಗಲಿದೆ.
ಜೂನ್ 2ರಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಭಾರೀ ಮಳೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲೂ ಮಳೆ ಹೆಚ್ಚಾಗಲಿದೆ ಜೂನ್ 2 ಮತ್ತು 3ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ರೈತರಿಗೆ ಸಿಹಿ ಸುದ್ದಿ: ಮಾರುಕಟ್ಟೆಯಲ್ಲಿ ಗೋಧಿಗೆ ಬಂಪರ್ ಬೆಲೆ: ರೈತರ ಮುಖದಲ್ಲಿ ನಗೆ!
Paddy: ಉತ್ತಮ ಇಳುವರಿ ನೀಡುವ ರೋಗ ನಿರೋಧಕ ಭತ್ತದ ತಳಿಗಳ ಕುರಿತು ಇಲ್ಲಿದೆ ಸಮಗ್ರ ಮಾಹಿತಿ…
ಉತ್ತರ ಕರ್ನಾಟಕದಲ್ಲಿ ಒಣಹವೆ
ಇಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಧಾರವಾಡ, ರಾಯಚೂರು, ಯಾದಗಿರಿ. ಬೆಳಗಾವಿಯಲ್ಲಿ ಒಣ ಹವೆ ಮುಂದುವರೆಯಲಿದೆ.
ಇಂದು ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕೊಪ್ಪಳ ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಗಳಲ್ಲಿ ಒಣ ಹವೆ ಇರಲಿದ ಇಂದು ಬೀದರ್ನಲ್ಲಿ ಕೂಡ ಒಣ ಹವೆ ಇರಲಿದ್ದು, ರಾಜ್ಯದ ಉಳಿದ ಭಾಗದಲ್ಲಿ ಮಳೆಯಾಗಲಿದೆ.
Share your comments