ತೋಟಗಾರಿಕೆ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ಎಲ್ಲ ವರ್ಗದ ರೈತರಿಗೆ ಸೂಕ್ಷ್ಮ ಹನಿ ನೀರಾವರಿ ಯೋಜನೆಯಡಿ ಪ್ರತಿ ಫಲಾನುಭವಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶಗಳಿಗೆ ಹಾಗೂ ತರಕಾರಿ ಮತ್ತು ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ನೀಡಲಾಗುತ್ತಿದೆ.
ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ಪೂರ್ವ ತಾಲ್ಲೂಕು ತೋಟಗಾರಿಕೆ ಕಚೇರಿಯಲ್ಲಿ ಹೆಸರು ನೋಂದಾಯಿಸಿ ಕಾರ್ಯಾದೇಶ ಪಡೆಯಬೇಕು. ಕಾರ್ಯಾದೇಶ ಪಡೆಯದೇ ಅಳವಡಿಸಿಕೊಂಡಲ್ಲಿ ಸಹಾಯಧನಕ್ಕೆ ಪರಿಗಣಿಸಲಾಗುವುದಿಲ್ಲ. ಮಾಹಿತಿಗಾಗಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಧಾರವಾಡ ತೋಟಗಾರಿಕೆಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಹನಿ ನೀರಾವರಿಗೆ ಶೇ. 90 ರಷ್ಟು ಸಹಾಯಧನ
ತೋಟಗಾರಿಕೆ ಇಲಾಖೆ ಹನಿ ನೀರಾವರಿ ಯೋಜನೆಯಡಿ ಸಹಾಯಧನ ಸೌಲಭ್ಯ ದೊರೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಸ್.ಕೇಶವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಯೋಜನೆಯಡಿ ಫಲಾನುಭವಿಗೆ ಗರಿಷ್ಠ 2 ಎಕರೆ ಪ್ರದೇಶದ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಅವಕಾಶವಿದೆ. ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90ರಷ್ಟು ಸಹಾಯಧನ ದೊರೆಯುತ್ತದೆ. ಆಸಕ್ತರು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಿ ಅರ್ಜಿ ಸಲ್ಲಿಸಲು ಕೋರಿದೆ
ಹನಿ ನಿರಾವರಿ ಸಹಾಯಧನ ಪಡೆಯಲು ಅರ್ಜಿ ಅಲ್ಲಿಸಿ
ತೋಟಗಾರಿಕೆ ಬೆಳೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಸಲುವಾಗಿ ತೋಟಗಾರಿಕೆ ಇಲಾಖೆ ಹನಿ ನೀರಾವರಿ ಯೋಜನೆ ಅನುಷ್ಠಾನಗೊಳಿಸುತ್ತಿದ್ದು ಈ ಯೋಜನೆಯಡಿ ರೈತರಿಗೆ ಸಹಾಯ ಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನಲ್ಲಿ ಕೃಷಿ ಸಂಚಯಿನಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಶೇ 90 ಸಹಾಯಧನದಲ್ಲಿ ಹನಿ ನೀರಾವರಿ ಅಳವಡಿಕೆಗೆ ಅವಕಾಶವಿದ್ದು, 5 ಎಕರೆವರೆಗೂ ಹನಿ ನೀರಾವರಿ ವಿಸ್ತರಿಸಿಕೊಳ್ಳಬಹುದು.
ಆಸಕ್ತ ರೈತರು ಡಿ. 31 ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ತಾಲ್ಲೂಕಿನ ಹೊಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಬಣಕಾರ ತಿಳಿಸಿದ್ದಾರೆ.
Share your comments