ರಾಜ್ಯದಲ್ಲಿ ದಿನದಿಂದ ದಿನಕ್ಕ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತೀ ರವಿವಾರ ಲಾಕ್ ಡೌನ್ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ, ಇದರೊಂದಿದೆ ಸರಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಲು ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು , ಜುಲೈ 5 ರಿಂದ ಪ್ರತಿಭಾನುವಾರ ರಾತ್ರಿ 8ರಿಂದ ಬೆಳಗ್ಗೆ 5 ಗಂಟೆಯವರೆಗೂ ಸಂಪೂರ್ಣ ಕರ್ಫ್ಯೂ ಇರದಲಿದೆ. ಪ್ರತಿ ಭಾನುವಾರ ಲಾಕ್ ಡೌನ್ ಮಾಡಲು ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ. ಈ ಸಂದರ್ಭ ಬಸ್ಸು, ಟ್ಯಾಕ್ಸಿ, ಸೇರಿದಂತೆ ಯಾವುದೇ ವಾಹನಗಳು ರಸ್ತೆಗೆ ಇಳಿಯುವುದಿಲ್ಲ, ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳು ಬಂದ್ ಆಗಲಿವೆ. ಇನ್ನು ಸರ್ಕಾರಿ ನೌಕರರೂ ಕೊರೋನಾಗೆ ತುತ್ತಾಗುತ್ತಿರುವುದರಿಂದ ಮುಂದಿನ ವಾರದಿಂದ 5 ದಿನ ಮಾತ್ರ ಸರ್ಕಾರಿ ಕಚೇರಿಗಳು ಕೆಲಸ ನಿರ್ವಹಿಸಲಿವೆ.
Share your comments