ಬಳ್ಳಾರಿ: ಧಾರವಾಡ ಶಹರದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2023-24ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ, ಯುದ್ಧದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಧಾರವಾಡ, ಗದಗ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳ ಗ್ರಾಮಾಂತರ ಪ್ರದೇಶ ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಯುದ್ಧದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಗೆ ಮೆಟ್ರಿಕ್ ಪೂರ್ವ 5ನೇ ತರಗತಿಯಿಂದ 10ನೇ ತರಗತಿಯವರಿಗೆ, ಆದ್ಯತೆ ಹಾಗೂ ಅರ್ಹತೆ ಮೇರೆಗೆ ಮೆಟ್ರಿಕ್ ನಂತರದ ಪಿಯುಸಿ ವಸತಿ ನಿಲಯದಲ್ಲಿ ಉಚಿತ ಪ್ರವೇಶವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ನಂತರವೇ ನಿಲಯದಲ್ಲಿ ಪ್ರವೇಶ ನೀಡಲಾಗುವುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಧಾರವಾಡದ ಜಿಲ್ಲಾಧಿಕಾರಿಗಳ ಕಾರ್ಯಾಲಯ ಆವರಣದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ ೩೦ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ Sainikwelfaredwd@gmail.com ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ: ಅರ್ಜಿ ಆಹ್ವಾನ
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ 2023-24ನೇ ಸಾಲಿನಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ (ಪಿ.ಯು.ಸಿ. ಮತ್ತು ಪಿ.ಯು.ಸಿ. ಸಮನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿ ಕಲ್ಪಿಸಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಆನ್‍ಲೈನ್‍ನ https://shp.karnataka.gov.in ವೆಬ್‍ಸೈಟ್‍ಗೆ ಭೇಟಿ ನೀಡಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 15 ಆಗಿರುತ್ತದೆ.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in
ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
-ಡಿಐಪಿಆರ್ ಬಳ್ಳಾರಿ
Share your comments