1. ಸುದ್ದಿಗಳು

ಅನ್ನದಾತರಿಗೆ ಬಂಪರ್ ಗಿಫ್ಟ್- ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 7 ನೇ ಕಂತಿನ ಹಣ ಇಂದು ರೈತರ ಖಾತೆಗೆ ಜಮೆ

farmer

ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯಡಿ ಯೋಜನೆಯ 7 ನೇ ಕಂತಿನ ಹಣ ಇಂದು ಮಧ್ಯಾಹ್ನ 12 ಗಂಟೆಗೆ ದೇಶದ 9 ಕೋಟಿ ರೈತರ ಖಾತೆಗೆ ಜಮೆಯಾಗಲಿದೆ.

ಹೌದು ಇದು ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಾಹ್ನ 12 ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಬಟನ್ ಒತ್ತುವ ಮೂಲಕ 18 ಸಾವಿರ ಕೋಟಿ ರುಪಾಯಿ ಬಿಡುಗಡೆಮಾಡಲಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಾಯಿಸಿದ ದೇಶದ ಸುಮಾರು ಒಂಬತ್ತು ಕೋಟಿ ರೈತರಿಗೆ ತಲಾ 2 ಸಾವಿರ ರೂಪಾಯಿ 7ನೇ ಕಂತಿನ ಹಣ ಜಮೆಯಾಗಲಿದೆ.

ಇಂದು ದೇಶದ ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿವರ ಹುಟ್ಟುಹಬ್ಬವೂ ಇರುವದರಿಂದ ದೇಶದ ರೈತರೊದಿಗೆ ಸಂವಾದ ನಡೆಸಲಿದ್ದಾರೆ.

ಪ್ರಧಾನಿ ಕಚೇರಿ ನೀಡಿರುವ ಮಾಹಿತಿಯ ಪ್ರಕಾರ,  ಒಂದು ಗುಂಡಿಯನ್ನು ಒತ್ತುವ ಮೂಲಕಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಫಲಾನುಭವಿ ರೈತ ಕುಟುಂಬಗಳಿಗೆ 18 ಸಾವಿರ ಕೋಟಿಗೂ ಹೆಚ್ಚು ಹಣವನ್ನು ವರ್ಗಾಯಿಸಲಿದ್ದಾರೆ. ನಂತರ ಕಾರ್ಯಕ್ರಮದಲ್ಲಿ ಮೋದಿ ಆರು ರಾಜ್ಯಗಳ ರೈತರೊಂದಿಗೆ ಸಂವಹನ ನಡೆಸಲಿದ್ದಾರೆ.

ಪಿಎಂ ಕಿಸಾನ್ ಸ್ಟೇಟಸ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೋ ಇಲ್ಲವೋ, ಅಥವಾ ಯಾವ ಹಂತದಲ್ಲಿದೆ ಎಂಬುದನ್ನು ಸಹ ಮನೆಯಲ್ಲಿ ಕುಳಿತು ಚೆಕ್ ಮಾಡಬಹುದು.

ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಲು ಈ ಲಿಂಕ್. https://pmkisan.gov.in/beneficiarystatus.aspx ಕ್ಲಿಕ್ ಮಾಡಿ

Published On: 24 December 2020, 09:33 PM English Summary: PM Kisan fund release today

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.