ರಾಜ್ಯದ ಬಹುತೇಕ ಕಡೆ ಮುಂದಿನ 48 ಗಂಟೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಸೆ. 8ರಿಂದ 11ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಕರಾವರಳಿಯಲ್ಲಿ ಸೆ.8 ರಂದು ಆರೇಂಜ್ ಅಲರ್ಟ್, 9ರಂದು ಯೆಲ್ಲೋ ಅಲರ್ಟ್ ಹಾಗೂ 10ಮತ್ತು 11 ರಂದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ತುಮಕೂರು, ಬಾಗಲಕೋಟೆ, ಬೀದರ್, ಕಲಬುರ್ಗಿ, ವಿಜಯಪುರ, ಬಳ್ಳಾರಿ, , ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 3.3. ಮೀಟರ್ಗಳಷ್ಟು ಎತ್ತರದ ಅಲೆ
ಗಳು ಏಳುತ್ತಿರುವುದರಿಂದ ಮೀನುಗಾ ರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.
ಸೋಮವಾರ ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 24.ಸೆಂ.ಮೀ ಮಳೆಯಾಗಿದ್ದು, ಇದು ರಾಜ್ಯದ ಅತ್ಯದಿಕವಾಗಿತ್ತು. ದೇವದುರ್ಗ ಸಮೀಪದ ಖಾನಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸೇರಿ ಇಬ್ಬರು ಮೃತಪಟ್ಟು ಇಬ್ಬರಿಗೆ ಗಾಯಗಳಾದ ಘಟನೆ ಸೋಮವಾರ ಮಧ್ಯಾಹ್ನ ಜರುಗಿದೆ.
ಶಿವಮೊಗ್ಗದಲ್ಲಿ ಉತ್ತಮ ಮಳೆಯಾಗಿದೆ. ತೀರ್ಥಹಳ್ಳಿಯಲ್ಲಿ 1.2 ಸೆಂ.ಮೀ, ಆಗುಂಬೆಯಲ್ಲಿ 3.8 ಮಿ.ಮೀ ಮಳೆಯಾಗಿದೆ. ಭಾನುವಾರ ತಡ ರಾತ್ರಿ ಹಾಗೂ ಸೋಮವಾರ ಮುಂಜಾನೆ ಹುಬ್ಬಳ್ಳಿ, ವಿಜಯಪುರ, ಬೆಳಗಾವಿ ಜಿಲ್ಲೆಗಳ ವಿವಿಧೆಡೆ ಧಾರಾಕಾರ ಮಳೆಯಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 3 ಸೆಂ.ಮೀ. ಮಳೆ ದಾಖಲಾಗಿದೆ. ಕಲಬುರಗಿ ನಗರ, ಸೇಡಂ,ಅಫಜಲ್ಪುರ ಮತ್ತು ಯಡ್ರಾಮಿ ತಾಲ್ಲೂಕಿನ ವಿವಿಧೆಡೆ ಅರ್ಧ ಗಂಟೆಗೂ ಹೆಚ್ಚು ಹೊತ್ತು ಮಳೆಯಾಗಿದೆ.
Share your comments