ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24 ರವರೆಗೆ ಭಾರಿಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆಯ ಆರ್ಭಟ ಮತ್ತೆ ಆರಂಭವಾಗಿದೆ. ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆ ಬಿರುಸಾಗುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರ ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಮಂಗಳವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಕೊಡಗು, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆ ಸುರಿಯಲಿದೆ.
ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ. ತಿಂಗಳ ಆರಂಭದ 15 ದಿನಗಳು ಕರಾವಳ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ಕಳೆದ ನಾಲ್ಕೈದು ದಿನದಿಂದ ಮಳೆಯ ಆರ್ಭಟ ಕಡಿಮೆಯಾಗಿತ್ತು. ಈ ವರ್ಷ ಸೆಪ್ಟೆಂಬರ್ ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಂಗಳವಾರ ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದೇ ವೇಳೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಸೆಪ್ಟೆಂಬರ್ ತಿಂಗಳ ಅಂತ್ಯದ ತನಕ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ. ವಿವಿಧ ರಾಜ್ಯಗಳಲ್ಲಿ ಇನ್ನೂ 4 ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನಿಡಿದೆ. ಗುಜರಾತ್ನಲ್ಲಿ ಇನ್ನೂ 4 ದಿನ, ಕೇರಳದಲ್ಲಿ ಸೆಪ್ಟೆಂಬರ್ 23ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಸ್ಥಾನದ ಪೂರ್ವ ಭಾಗ, ಗುಜರಾತ್ನಲ್ಲಿ ಸೆಪ್ಟೆಂಬರ್ 20ರಿಂದ ಆರಂಭವಾಗಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ. ಉತ್ತರಾಖಂಡ, ನೈಋತ್ಯ ರಾಜಸ್ಥಾನ, ಮಧ್ಯ ಪ್ರದೇಶ, ವಿದರ್ಭಾ, ಛತ್ತೀಸ್ಗಡ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳು, ಸೌರಾಷ್ಟ್ರ, ಕಚ್ ಹಾಗೂ ತಮಿಳುನಾಡು, ಪುದುಚೇರಿ, ಕಾರೈಕಲ್ನಲ್ಲಿ ಅಧಿಕ ಮಳೆಯಾಗುವುದಾಗಿ ತಿಳಿಸಿದೆ.
Share your comments