ಬೆಂಗಳೂರು ಸೇರಿದಂತೆ ರಾಜ್ಯದ 20 ಜಿಲ್ಲೆಗಳಲ್ಲಿ ನವೆಂಬರ್ 17ರ ವರೆಗೆ ಕೆಲವೆಡೆ ಸಾಧಾರಣ ಹಾಗೂ ಇನ್ನೂ ಕೆಲವೆಡೆ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಧೈರ್ಯ ಮೆರೆದ ಐವರು ಮಕ್ಕಳಿಗೆ “ಶೌರ್ಯ” ಪ್ರಶಸ್ತಿಯ ಗರಿ!
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ತುಂತುರು ಮಳೆ ಆಗುತ್ತಿದೆ. ಹಿಂಗಾರು ಮಳೆ ಮುಗಿಯುವ ಲಕ್ಷಣಗಳಿತ್ತು. ಇದರ ನಡುವೆ ಚಳಿ ವಿಪರಿತವಾಗಿತ್ತು.
ಆದರೆ, ಇದೀಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಮತ್ತು ದಕ್ಷಿಣ ಭಾರತದ ಹಲವು ಭಾಗದಲ್ಲಿ ಮಳೆ ಮುಂದುವರಿದಿದೆ.
ರಾಜ್ಯದಲ್ಲಿ ಧಾರಾಕಾರ ಮಳೆ ಸಾಧ್ಯತೆ: ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡದ ಕರಾವಳಿ ಜಿಲ್ಲೆಗಳು, ಉತ್ತರ ಕನ್ನಡ, ಉಡುಪಿ, ಧಾರವಾಡ , ಗದಗ, ಹಾವೇರಿ, ಕೊಪ್ಪಳ,
ರಾಯಚೂರು, ಮಲೆನಾಡು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ರಾಮನಗರ ಮತ್ತು ತುಮಕೂರಿನಲ್ಲಿ ಸುತ್ತಮುತ್ತಲಿನ
ಪ್ರದೇಶದಲ್ಲಿ ಅಲ್ಲಲ್ಲಿ ಚದುರಿದಂತೆ ಇನ್ನೂ ಕೆಲವು ಕಡೆ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚುದುರಿದಂತೆ ಮಳೆ ಆಗುವ ಸಾಧ್ಯತೆ ಇದೆ. ಬೆಳಿಗ್ಗೆ ಮೋಡ ಮುಸುಕಿದ ವಾತಾವರಣ ಇರಲಿದೆ.
ಹಾಲು, ಮೊಸರು ದರ ಏರಿಕೆಗೆ ಸಿ.ಎಂ ತಾತ್ಕಾಲಿಕ ತಡೆ!
ರಾಜ್ಯದ ಸಮತಟ್ಟು ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 14.4 ಡಿ.ಗ್ರಿ ಸೆಲ್ಸಿಯಸ್ ಬಾಗಲಕೋಟೆ ಮತ್ತು ಬೀದರ್‌ನಲ್ಲಿ ದಾಖಲಾಗಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಮತ್ತು ಉತ್ತರ ಒಳನಾಡಿನ ಒಂದೆರಡು ಪ್ರದೇಶದಲ್ಲಿ ಹಗುರ ಮಳೆ ಆಗುವ ಸಾಧ್ಯತೆ ಇದೆ.
ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಇದನ್ನೂ ಓದಿರಿ: ತೆಲುಗು ನಟ ಮಹೇಶ್ ಬಾಬು ತಂದೆ ಕೃಷ್ಣ ಘಟ್ಟಮನೇನಿ ಇನ್ನಿಲ್ಲ!
ಮುಂದಿನ 24 ಗಂಟೆಗಳ ಕಾಲ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಉಳಿದಂತೆ ಮೀನುಗಾರರಿಗೆ ಯಾವುದೇ ಮುನ್ಸೂಚನೆ ಇಲ್ಲ ಹಾಗೂ ಭಾರೀ ಮಳೆ ಆಗುವ ಸಾಧ್ಯತೆ ಸಹ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ರಾಜ್ಯದ ಮಕ್ಕಳಿಗೆ ಮನೆ ಬಾಗಿಲಿಗೆ ಬಂದು ಕೊಡ್ತಾರೆ “ಆಧಾರ್ ಕಾರ್ಡ್”!
ತಮಿಳುನಾಡಿನಲ್ಲಿ ಧಾರಾಕಾರ ಮಳೆ
ತಮಿಳುನಾಡಿನಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ತಮಿಳುನಾಡಿನ ಹಲವು ಪ್ರದೇಶದಲ್ಲಿ ಸಮಸ್ಯೆ ಸೃಷ್ಟಿ ಆಗಿದೆ.
ಚೆನ್ನೈ, ತಿರುವಳ್ಳೂರು, ವೇಲೂರು, ರಾಣಿಪ್‌ಪೇಟೆ, ಕಾಂಚಿಪುರಂ, ಇಟ್ಟಿಗೆಪಟ್ಟಿ ಮುಂತಾದ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಮಾಲೀಕನ ಹುಡುಕಿ ಕೊಟ್ಟ ನಾಯಿ, ಗ್ರಾಮಸ್ಥರ ಹರ್ಷ!
ಯೆಲ್ಲೋ ಅಲರ್ಟ್
ತಿಂಡುಗಲ್, ಪುದುಕೊಟ್ಟೈ, ತೇನಿ, ಮಧುರೈ, ರಾಮನಾಥಪುರ, ತುತ್ತೂರಿ, ತಿರುನಲ್ವೇಲಿ ಮತ್ತು ಕನ್ಯಾಕುಮಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಾಲೀಕನ ಹುಡುಕಿ ಕೊಟ್ಟ ನಾಯಿ, ಗ್ರಾಮಸ್ಥರ ಹರ್ಷ!
ಹಸಿರು ಅಲರ್ಟ್
ತಿರುಬತ್ತೂರ್, ಕೃಷ್ಣಗಿರಿ, ಧರ್ಮಪುರಿ, ತಿರುವಣ್ಣಮಲೈ, ಕಡಲೂರು, ಸೇಲಂ, ಪೆರಂಬಲೂರು, ಅರಿಯಲೂರು, ನಾಗಪಟ್ಟಿಣಂ, ಈರೋಡು, ನಾಮಕಲ್, ತಿರುವರೂರು, ನಾಗಪಟ್ಟಿನಂ, ತಂಜಾವೂರು, ತಿರುವಾರೂರು, ಕಾರೈಕಾಲ್, ಶಿವಗಂಗೈ, ತಿರುಪುರ್, ಕೋಯಂಬುತ್ತೂರು, ದಕ್ಷಿಣ ದಕ್ಷಿಣ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ತಮಿಳುನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಕಾಂಜುಪುರ, ಚೆನ್ನೈ ಹಾಗೂ ತಿರುವಳ್ಳೂರು ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು,
ಈ ಭಾಗದಲ್ಲಿ ಶಾಲಾ- ಕಾಲೇಜುಗಳಲ್ಲಿ ಮಂಗಳವಾರ ಮತ್ತು ಬುಧವಾರ ರಜೆ ನೀಡಲಾಗಿದೆ.
ತಮಿಳುನಾಡಿನ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನ ಸಂಕಷ್ಟ ಎದುರಿಸುವಂತಾಗಿದೆ.
Share your comments