ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಹಾಗೂ ಬುಧವಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇಂದ್ರ ಸರ್ಕಾರದ 2023-24ನೇ ಸಾಲಿನ ಬಜೆಟ್: ಕೃಷಿ ಕ್ಷೇತ್ರಕ್ಕೆ ಉತ್ತೇಜನದ ನಿರೀಕ್ಷೆ
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ. ಉಳಿದಂತೆ ರಾಜ್ಯದಾದ್ಯಂತ ಒಣಹವೆ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಉಷ್ಣಾಂಶದ ಕುರಿತು ಎಚ್ಚರಿಕೆ
ಕನಿಷ್ಠ ಉಷ್ಣಾಂಶವು ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಗಳಿವೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರವಾಗಿ ಮಳೆ ಆಗುವ ಸಾಧ್ಯತೆಗಳು ಬಹಳಷ್ಟಿವೆ. ಬೆಂಗಳೂರಿನ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತವೆ. ಇನ್ನು ಗರಿಷ್ಠ ಉಷ್ಣಾಂಶವು 28 ಮತ್ತು ಕನಿಷ್ಠ ಉಷ್ಣಾಂಶವು 18 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಜಯಲಲಿತಾಗೆ ಸೇರಿದ್ದ 11,000 ಸಾವಿರ ರೇಷ್ಮೆ ಉಡುಪು ಹರಾಜಿಗೆ!
ಮುಂದಿನ 48 ಗಂಟೆಗಳ ಅವಧಿಯಲ್ಲಿ (ಬುಧವಾರ ಹಾಗೂ ಗುರುವಾರ) ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತವೆ. ಇನ್ನು ಗರಿಷ್ಠ ಉಷ್ಣಾಂಶವು 28 ಮತ್ತು ಕನಿಷ್ಠ ಉಷ್ಣಾಂಶವು 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಇನ್ನು ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆಯಲ್ಲಿ ದಾಖಲಾಗಿದೆ.
ಸಾಧಾರಣ ಮಳೆ ಆಗುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆಯನ್ನು ನೀಡಿಲ್ಲ.
------------------------
ಬಜೆಟ್‌ನಲ್ಲಿ ರೈತರ ಸಮಸ್ಯೆಗೆ ಸ್ಪಂದಿಸಲು ಆಗ್ರಹ
ಕೇಂದ್ರ ಸರ್ಕಾರವು ಬುಧವಾರ ಮಂಡನೆ ಮಾಡಲಿರುವ 2023-24ನೇ ಸಾಲಿನ ಬಜೆಟ್‌ನಲ್ಲಿ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಪರಿಹಾರಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.
ಎಲ್ಲಾ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಶಾಸನಾತ್ಮಕ ಖಾತ್ರಿ ನೀಡುವ ಪ್ರಧಾನಿ ಭರವಸೆ ಜಾರಿಯಾಗಬೇಕು. ಕೃಷಿ ಉತ್ಪನ್ನಗಳ ಮೇಲೆ ರಸಗೊಬ್ಬರ, ಕೀಟನಾಶಕ ಹನಿ, ನೀರಾವರಿ ಉಪಕರಣಗಳ ಮೇಲೆ ವಿಧಿಸಿರುವ ಜಿಎಸ್‌ಟಿ ರದ್ದುಗೊಳಿಸಬೇಕು. ಪ್ರಸಕ್ತವಾಗಿರುವ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಉತ್ಪಾದನಾ ಸಾಲ ಬಡ್ಡಿ ರಹಿತವಾಗಿರಬೇಕು ಕೃಷಿ ಭೂಮಿ ಮೌಲ್ಯದ ಶೇಕಡ 75ರಷ್ಟು ಸಾಲ ನೀಡುವಂತೆ ನೀತಿ ರೂಪಿಸಬೇಕು.
ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಯ ಮಹಾಪೂರ, 5 ಕೋಟಿ ಬಹುಮಾನ!
ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ಮಾನದಂಡ ಕೈಬಿಡಬೇಕು. ಕಬ್ಬಿನ ಎಫ್ಆರ್‌ಪಿ ದರವನ್ನು ರೈತರ ಹೊಲದಲ್ಲಿನ ದರ ಎಂದು ನಿಗದಿಪಡಿಸಬೇಕು. ಆಕಸ್ಮಿಕ ಬೆಂಕಿಗೆ ಸುಟ್ಟು ಹೋದ ಕಬ್ಬಿನಿಂದ ಸಕ್ಕರೆ ಕಾರ್ಖಾನೆಗಳು ಶೆ 25% ರಷ್ಟು ಹಣ ಕಡಿತ ಮಾಡುವುದನ್ನು ನಿಲ್ಲಿಸಬೇಕು.
ಕಬ್ಬಿನಿಂದ ಬರುವ ಸಕ್ಕರೆ ಇಳುವರಿ ಕನಿಷ್ಠ 9:5 ಕೆ ಇಳಿಸಬೇಕು. ಕಬ್ಬು ಉತ್ಪಾದನಾ ವೆಚ್ಚ ಏರಿಕೆಯಾಗಿರುವ ಕಾರಣ ಎಪ್ ಆರ್‌ಪಿ ದರವನ್ನು 2023-24ನೆ ಸಾಲಿಗೆ ಕನಿಷ್ಠ ಟನ್ಗೆ 3500 ನಿಗದಿ ಮಾಡಬೇಕು. ಕಬ್ಬಿನಿಂದ ಉತ್ಪಾದಿಸುವ ಯತನಾಲ್ ನೀತಿ ಬದಲಾಯಿಸಿ ಮುಕ್ತ ಅವಕಾಶ ಕಲ್ಪಿಸಬೇಕು, ರೈತರ ಬೆಲ್ಲದ ಗಾಣದಲ್ಲಿ ಉತ್ಪಾದನೆಗೆ ಅವಕಾಶ ಕಲ್ಪಿಸಬೇಕು. ಎಲ್ಲ ಕೃಷಿ ಉತ್ಪನ್ನ ಬೆಳೆಗಳಿಗೂ ಪಸಲ್ ಬಿಮಾ ಬೆಳೆ ವಿಮೆ ಯೋಜನೆ ಜಾರಿ ತರಬೇಕು ಈ ಯೋಜನೆ ಕೆಲವು ತಿದ್ದುಪಡಿಗಳು ಆಗಬೇಕು.
ಅತಿವೃಷ್ಟಿ-ಅನಾವೃಷ್ಟಿ ಆಕಸ್ಮಿಕ ಬೆಂಕಿ ಪ್ರವಾಹ ಹಾನಿ ಬೆಳೆ ನಾಶ ಪರಿಹಾರ ಮಾನದಂಡ ವೈಜ್ಞಾನಿಕವಾಗಿ ಬದಲಾಗಬೇಕು. ವನ್ಯಮೃಗಗಳ ಸಂರಕ್ಷಣೆ, ಮಾನವ ರಕ್ಷಣಾ ಕಾಯ್ದೆ ಕಾಡು ಪ್ರಾಣಿಗಳ ಹಾವಳಿ ತಡೆ ಕಾನೂನು1972 ಕ್ಕೆ ತಿದ್ದುಪಡಿ ತರಬೇಕು. ಕಾಡು ಪ್ರಾಣಿಗಳ ದಾಳಿಗೆ ತುತ್ತಾದ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತ 50 ಲಕ್ಷ ರೂಗಳಿಗೆ ಏರಿಸಬೇಕು.
ಕೇಂದ್ರ ಸರ್ಕಾರವೇ ಆರಂಭಿಸಿರುವ ಕೊರೊನಾ ಲಾಕ್‌ಡೌನ್ ಸಂಕಷ್ಟದಲ್ಲಿ ಸಿಲುಕಿರುವ ಎಲ್ಲಾ ರೈತ ಉತ್ಪಾದಕ ಸಂಸ್ಥೆಗಳಿಗೆ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ಹೊಸ ಸಾಲ ಎಂದು ಪರಿಗಣಿಸಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ಮುನ್ನಡೆಸಲು ಪುನಶ್ಚೇತನ ಸಾಲ ನೀಡಿ ಪ್ರೋತ್ಸಾಹಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ರೈತರಿಗೆ ಬ್ಯಾಂಕ್ ಸಾಲದ ಮಿತಿ ಹೆಚ್ಚಿಸಲು ವೈಜ್ಞಾನಿಕ ವರದಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share your comments