Weather Report Today : 30 ಏಪ್ರಿಲ್ 2023ಕ್ಕೆ ಅನುಗುಣವಾಗುವಂತೆ ಬೆಳಿಗ್ಗೆ ಹೊರಡಿಸಲಾದ ರಾಜ್ಯದಲ್ಲಿಯ ಮಳೆಯ ಮುನ್ಸೂಚನೆ ವರದಿ ಹೀಗಿದೆ..
ಮುಂದಿನ 24 ಘಂಟೆಗಳು ಎಲ್ಲೆಲ್ಲಿ ಮಳೆ..?
ಮುಂದಿನ 24 ಘಂಟೆಗಳು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳ ಹಲವು ಕಡೆಗಳಲ್ಲಿ; ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆ/ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಅಂದರೆ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳ ಹಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು ಮಳೆಯ ಮುನ್ಸೂಚನೆಯನ್ನು ಗಮನಿಸುವುದಾದರೆ
ಉತ್ತರ ಒಳನಾಡಿನ ಬೀದರ್, ಕಲಬುರ್ಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹಾಗೂ ಯಾದಗಿರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಗುಡುಗು ಮುನ್ನೆಚ್ಚರಿಕೆ ಅಂದಾಜು ಹೇಗಿದೆ..?
ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಒಳನಾಡಿನ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
30 ನೇ ಏಪ್ರಿಲ್ 2023 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ/ರಾತ್ರಿಯ ಸಮಯದಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ/ರಾತ್ರಿಯ ಸಮಯದಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
Share your comments