1. ಸುದ್ದಿಗಳು

ತೊಗರಿ ಬೆಳೆ: ವಿಮೆ ಕಂತು ತುಂಬಲು ಜುಲೈ 31 ಕೊನೆಯ ದಿನ

ಮುಂಗಾರು ಹಂಗಾಮಿಗೆ ಪ್ರಮುಖ ಬೆಳೆಯಾದ ತೊಗರಿ ಮಳೆಯಾಶ್ರಿತ ಮತ್ತು ನೀರಾವರಿ ಬೆಳೆಗೆ ರೈತರು ಬೆಳೆ ವಿಮೆ ನೊಂದಣಿ ಮಾಡಿಸಲು 2020ರ ಜುಲೈ 31 ಕೊನೆಯ ದಿನವಾಗಿದೆ.

  2020 ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಅನುಷ್ಠಾನಗೊಳಿಸಲು ಯುನಿವರ್ಸಲ್ ಸೊಂಪೊ  ಜನರಲ್  ಇನ್ಸುರೆನ್ಸ್ ಕಂಪನಿ ಲಿ. ಬೆಂಗಳೂರು (Universal Sompo General Insurance Co.Ltd, Bangalore)  ವಿಮಾ ಸಂಸ್ಥೆ ನಿಗದಿಪಡಿಸಲಾಗಿದೆ.

ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಥವಾ ಸ್ಥಳ, ನಿರ್ದಿಷ್ಟ, ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸ್ಪೋಟ  ಹಾಗೂ ಗುಡುಗು ಮಿಂಚುಗಳಿಂದಾಗಿ ಉಂಟಾಗುವ ಬೆಂಕಿ ಅವಗಡ ಸಂದರ್ಭದಲ್ಲಿ ಬೆಳೆ ನಷ್ಟವುಂಟಾದರೆ ರೈತರು ಬೆಳೆ ವಿಮೆಯ ಸದುಪಯೋಗ ಪಡೆದುಕೊಳ್ಳಬಹುದು.

 ರೈತ ಭಾಂದವರು ಉಳಿದ ಬೆಳೆಗಳ ಆಯ್ಕೆಗೆ ಸಂಬಂದಿಸಿದಂತೆ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಹಾಗೂ ನೋಂದಣಿಗಾಗಿ ಹತ್ತಿರದ ಬ್ಯಾಂಕುಗಳಿಗೆ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘÀಗಳಿಗೆ ಸಂಪರ್ಕಿಸಿ ಬೆಳೆ ವಿಮೆ ನೊಂದಣಿಯ ಸದುಪಯೋಗವನ್ನು ಪಡೆದುಕೊಳ್ಳಬಹುದು.

Published On: 06 July 2020, 07:20 PM English Summary: Red gram crop insurance up to 31st july

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.