1. ಸುದ್ದಿಗಳು

ಅಸಂಖ್ಯಾತ ಕನ್ನಡಿಗರಿಗೆ ಬರಹಗಳ ಹುಚ್ಚು ಹತ್ತಿಸಿದ ಖ್ಯಾತ ಪತ್ರಕರ್ತ ರವಿ ಬೆಳಗೆರೆ ಇನ್ನಿಲ್ಲ..!

ಬರವಣಿಗೆಯಿಂದಲೇ ಬದುಕು ಕಟ್ಟಿಕೊಂಡ ನಾಡಿನ ಖ್ಯಾತ ಪತ್ರಕರ್ತ  ರವಿ ಬೆಳೆಗೆರೆ ಬರೆಯುತ್ತಲೇ ಬದುಕು ಮುಗಿಸಿದ್ದಾರೆ. ಇಂದಿಗೂ ಸಹ ನವ ಯುವ ಪತ್ರಕರ್ತರಿಗೆ ಬರವಣಿಗೆಯ ಹುಚ್ಚನ್ನೆಬ್ಬಿಸಿದ ರವಿ ಬೆಳೆಗೆರೆ ತನ್ನ ನೆಚ್ಚಿನ ಬರವಣಿಗೆಯ ಜತೆಜತೆಗೆ ಇಹಲೋಕ ತ್ಯಜಿಸಿದ್ದಾರೆ.

ಬರಹಗಳ ಮೂಲಕವೇ ಬೆರಗು ಮೂಡಿಸಿದ್ದ ಇವರು ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ. ಅನೇಕರಿಗೆ ಪುಸ್ತಕ ಓದುವಂತೆ ಪ್ರೇರಣೆ ಕೂಡ ನೀಡಿದ್ದರು. ಅಕ್ಷರ ಮಾಂತ್ರಿಕ ಎಂದೇ ಖ್ಯಾತಿ ಪಡೆದಿದ್ದ ಇವರು ಗುರುವಾರ ಮಧ್ಯರಾತ್ರಿ ಹನ್ನೆರಡರ ಸುಮಾರಿಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅದಾಗಲೇ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.

1958 ರ ಮಾರ್ಚ್ 15 ರಂದು ಬಳ್ಳಾರಿಯಲ್ಲಿ ಜನಿಸಿದ್ದ ರವಿ ಬೆಳೆಗೆರೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಪತ್ರಿಕೋದ್ಯಮ ವೃತ್ತಿ ಪ್ರಾರಂಭಿಸಿದ್ದ ಅವರು, ಕನ್ನಡಪ್ರಭ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು, ನಂತರ 1995 ರಲ್ಲಿ ಹಾಯ್ ಬೆಂಗಳೂರು ಟಾಬ್ಲಾಯ್ಡ್ ಪತ್ರಿಕೆಯನ್ನು ಪ್ರಾರಂಭಿಸಿದ್ದರು.

ರವಿ ಬೆಳೆಗೆರೆ ಅವರ ಬಾಟಮ್ ಐಟಮ್, ಖಾಸ್ ಬಾತ್ ಅಂಕಣಗಳು ಅತ್ಯಂತ ಜನಪ್ರಿಯ. ಹಿಮಾಗ್ನಿ, ನೀನಾ ಪಾಕಿಸ್ತಾನ? ಡಿ ಕಂಪನಿ, ದಂಗೆಯ ದಿನಗಳು ಸೇರಿದಂತೆ ಅನೇಕ ಕಾದಂಬರಿ, ಅನುವಾದ, ಕಥಾ ಸಂಕಲನ, ಅಂಕಣ ಬರಹಗಳು, ಜೀವನ ಕಥನ ಒಳಗೊಂಡ ಸುಮಾರು 70 ಪುಸ್ತಕಗಳು ಪ್ರಕಟಗೊಂಡಿವೆ. ಪತ್ರಿಕೋದ್ಯಮದಲ್ಲಿ ಸಾಧನೆ ಮಾಡಿದ್ದ ರವಿ ಬೆಳೆಗೆರೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ.

ಹಾಯ್ ಬೆಂಗಳೂರು ಪತ್ರಿಕೆ ಆರಂಭಿಸಿದ ಇವರು ತನಿಖಾ ಪತ್ರಿಕೋದ್ಯಮದ ಮೂಲಕ ಭಾರಿ ಸಂಚಲನವನ್ನೇ ಮೂಡಿಸಿದ್ದರು. ಬಳ್ಳಾರಿಯಿಂದ ಬರೀ 400 ರೂಪಾಯಿ ಹಿಡಿದುಕೊಂಡು ಬಂದು ಬೆಂಗಳೂರಿನಲ್ಲಿ ಅಕ್ಷರ-ಬರವಣಿಗೆ ಮೂಲಕವೇ ಬದುಕು ಕಟ್ಟಿಕೊಂಡಿದ್ದ ಇವರು ಪ್ರಾರ್ಥನಾ ಎಂಬ ಶಿಕ್ಷಣ ಸಂಸ್ಥೆಯನ್ನೂ ಕಟ್ಟಿದ್ದಾರೆ. ಹಾಯ್ ಬೆಂಗಳೂರು ಪತ್ರಿಕಿಂದಲೇ ಇವರು ಕರ್ನಾಟಕದ ಮೂಲೆಮೂಲೆಯ ಜನರಿಗೂ ಚಿರಪರಿಚಿತರಾಗಿದ್ದರು. ಓ ಮನಸೇ ಮೂಲಕ ಜನಪ್ರಿಯಾಗಿದ್ದ ಇವರು, ಕಾದಂಬರಿ,ಅನುವಾದ, ಜೀವನ ಕಥನ ಸೇರಿದಂತೆ ಇನ್ನಿತರ ಬರಹಗಳನ್ನು ಬರೆದಿದ್ದ ಬೆಳಗೆರೆಯವರ ಪುಸ್ತಕಗಳು ಅಚ್ಚರಿಯ ರೀತಿಯಲ್ಲಿ ಮಾರಾಟವಾಗುತ್ತಿದ್ದವು.

Published On: 13 November 2020, 09:09 AM English Summary: Renowned journalist and writer ravi-belagere no more

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.