ದಕ್ಷಿಣ ಒಳನಾಡಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆಯ ಆರ್ಭಟ ಜೋರಾಗಿತ್ತು. ಆದರೆ ಶುಕ್ರವಾರ ಸಂಜೆಯ ವೇಳೆಗೆ ಮುಂಗಾರು ದುರ್ಬಲಗೊಂಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆ ಮುಂದುವರಿದಿದೆ.ಜೂ.24ರವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ. ಮುಂದಿನ ಮಂಗಳವಾರದ ವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಭಾವ ಕಡಿಮೆಯಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಮಳೆಯ ಆರ್ಭಟ ಜೋರಾಗಿತ್ತು. ಈಗ ಕ್ಷೀಣಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇದೆ 23ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಐದು ದಿನಗಳಲ್ಲೂ ಈ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಿರುಗಾಳಿ ಸಮೇತ ಮಳೆ ಮುನ್ಸೂಚನೆ ನೀಡಿದ್ದು, ಕರಾವಳಿ ಪ್ರದೇಶಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
Share your comments